ಬೆಂಗಳೂರು: ಮಾಜಿ ಸಂಸದೆ ರಮ್ಯಾ ವಿಧಾನ ಪರಿಷತ್ತಿಗೆ ನಾಮ ನಿರ್ದೇಶನಗೊಂಡು ರಾಜ್ಯದ ಸಂಪುಟಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ವದಂತಿಯನ್ನು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಳ್ಳಿಹಾಕಿದ್ದಾರೆ.
ರಮ್ಯಾ ಅವರನ್ನು ಪರಿಷತ್ತಿಗೆ ಆಯ್ಕೆ ಮಾಡುವ ಪ್ರಸ್ತಾಪವೇ ಇಲ್ಲ. ಈ ಬಗ್ಗೆ ಯಾವುದೇ ಚರ್ಚೆ ಈವರೆಗೆ ನಡೆದಿಲ್ಲ ಎಂದು ಸುದ್ದಿಗಾರರಿಗೆ ಸ್ಪಷ್ಟಪಡಿಸಿದರು. ರಮ್ಯಾ ಅವರಂತಹ ಯುವ ನಾಯಕಿಯನ್ನು ನಾವು ಸಂಸತ್ತಿನಲ್ಲಿ ನೋಡಲು ಬಯಸುತ್ತೇವೆ. ಸಿದ್ದರಾಮಯ್ಯ ಸಂಪುಟದಲ್ಲಿ ಸ್ಥಾನ ದೊರಕಿಸಿಕೊಡಲು ಒಕ್ಕಲಿಗ ಸಮುದಾಯದಲ್ಲಿ ಇನ್ನೂ ಹಲವು ಮಂದಿ ನಾಯಕರು ಇದ್ದಾರೆ ಎಂದು ಹೇಳಿದರು.
ಇನ್ನು ಕಾಂಗ್ರೆಸ್ ಬಂಡಾಯ ನಾಯಕರ ವಿಚಾರಕ್ಕೆ ಪ್ರತಿಕ್ರಿಯಿಸಿದ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ಕೊಳ್ಳಲಾಗುವುದು, ಅವರ ಮನವೊಲಿಕೆಗೆ ಪ್ರಯತ್ನ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.