ಬಿ.ಎಸ್. ಯಡಿಯೂರಪ್ಪ 
ರಾಜಕೀಯ

ಬಿಜೆಪಿಯಲ್ಲೂ ಭಿನ್ನಮತ ಸ್ಫೋಟ, ಬಿಎಸ್ ವೈ ಏಕಪಕ್ಷೀಯ ನಿರ್ಧಾರದ ವಿರುದ್ಧ ಆಕ್ರೋಶ

ಕಾಂಗ್ರೆಸ್ ಹಾಗೂ ಜೆಡಿಎಸ್ ನಂತರ ಇದೀಗ ಬಿಜೆಪಿಯಲ್ಲೂ ಭಿನ್ನಮತ ಸ್ಫೋಟಗೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಏಕ ಪಕ್ಷೀಯ...

ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ನಂತರ ಇದೀಗ ಬಿಜೆಪಿಯಲ್ಲೂ ಭಿನ್ನಮತ ಸ್ಫೋಟಗೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಏಕ ಪಕ್ಷೀಯ ನಿರ್ಧಾರದ ವಿರುದ್ಧ ಹಲವು ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಡಿಯೂರಪ್ಪ ಅವರ ಕಾರ್ಯವೈಖರಿ ಸ್ವಪಕ್ಷೀಯರ ತೀವ್ರ ಟೀಕೆಗೆ ಗುರಿಯಾಗಿರುವುದು ರಹಸ್ಯವಾಗಿ ಉಳಿದಿಲ್ಲ. ಪಕ್ಷಕ್ಕೆ ಹೊಸ ಪದಾಧಿಕಾರಿಗಳ ನೇಮಕದಲ್ಲಿ ಏಕಪಕ್ಷೀಯವಾಗಿ ಯಡಿಯೂರಪ್ಪ ನಿರ್ಧಾರ ಕೈಗೊಂಡಿದ್ದಾರೆ. ಬಿಜೆಪಿ ನಿಷ್ಠಾವಂತರನ್ನೂ ಕೈಬಿಟ್ಟು ಕೆಜೆಪಿ ಮೂಲದ ಮುಖಂಡರಿಗೆ ಪದಾಧಿಕಾರಿಗಳ ನೇಮಕಾತಿಯಲ್ಲಿ ಮಣೆ ಹಾಕಲಾಗಿದೆ ಅತೃಪ್ತ ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ.
ವಿಧಾನ ಪರಿಷತ್ತಿನ ಪ್ರತಿಪಕ್ಷದ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ಇಂದು ಬಿಜೆಪಿ ಕಚೇರಿಯಲ್ಲಿ ಅತೃಪ್ತರು ಸಭೆ ನಡೆಸಿದರು, ಸಭೆಯಲ್ಲಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದು ಆರೋಪಿಸಿ ಕೆಲ ಮುಖಂಡರು ಸಭೆಯಲ್ಲಿ ತಮ್ಮ ಬೇಸರ ತೋಡಿಕೊಂಡರು. ಮಾಜಿ ಸಚಿವರಾದ ಎಸ್.ಎ.ರವೀಂದ್ರನಾಥ್, ಸೊಗಡು ಶಿವಣ್ಣ, ಶಾಸಕ ಸಿ.ಟಿ.ರವಿ, ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲಾ ಘಟಕದ ಹಾಲಿ ಪದಾಧಿಕಾರಿಗಳು ಮತ್ತು ಅಸಮಧಾನಗೊಂಡ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು. 
ಇನ್ನು ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಸಭೆಯಲ್ಲಿ ಮುಖಂಡರು ವ್ಯಕ್ತಪಡಿಸಿದ ಅತೃಪ್ತಿಯನ್ನು ಯಡಿಯೂರಪ್ಪ ಅವರ ಗಮನಕ್ಕೆ ತರಲು ತೀರ್ವನಿಸಲಾಗಿದೆ ಎಂದರು.
ಇನ್ನು ತಮ್ಮ ವಿರುದ್ಧದ ಆರೋಪವನ್ನು ತಳ್ಳಿಹಾಕಿರುವ ಯಡಿಯೂರಪ್ಪ ಏಕಪಕ್ಷೀಯ ನಿರ್ಧಾರ ಕೈಗೊಳ್ಳುವ ಅನಿವಾರ್ಯತೆ ಇಲ್ಲ. ಇಂತಹ ವಿಚಾರಗಳನ್ನು ಬಹಿರಂಗವಾಗಿ ಚರ್ಚಿಸಲಾರೆ, ಪಕ್ಷದ ವೇದಿಕೆಯಲ್ಲಿ ಸಂಬಂಧಪಟ್ಟವರ ಜತೆ ಚರ್ಚಿಸಿ ಬಿಕ್ಕಟ್ಟು ಪರಿಹರಿಸಲಾಗುವುದು ಎಂದಿದ್ದಾರೆ.
ಬಿಜೆಪಿಯ ಭಿನ್ನಮತದ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದಗೌಡ ಅವರು, ಅವಕಾಶ ಕೇಳುವುದು ಭಿನ್ನಮತವಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!