ರಾಜಕೀಯ

ಎರಡು ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ; ರಾಜ್ಯಪಾಲರಿಗೆ ಬಿಜೆಪಿ ದೂರು

Shilpa D

ಬೆಂಗಳೂರು: ವಕ್ಫ್ ಆಸ್ತಿ ಕಬಳಿಕೆ ಮಾಡಿರುವವ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪ ನೇತೃತ್ವದ ನಿಯೋಗ ರಾಜಭವನಕ್ಕೆ ತೆರಳಿ ರಾಜ್ಯಪಾಲಾ ವಿ.ಆರ್ ವಾಲಾ ಅವರಿಗೆ ದೂರು ಸಲ್ಲಿಸಿದೆ.

ರಾಜ್ಯಪಾಲರ ಭೇಟಿಯ  ನಂತರ ವಿಧಾನಸೌಧದಲ್ಲಿ  ಸುದ್ದಿಗೋಷ್ಠಿ ನಡೆಸಿದ ಈಶ್ವರಪ್ಪ, 2 ಲಕ್ಷ ಮೌಲ್ಯದ  ವಕ್ಫ್ ಆಸ್ತಿ ಕಬಳಿಕೆ ಆಗಿದೆ ಎಂಬ ಆರೋಪವಿದೆ.  ಆದರೂ ಸರ್ಕಾರ ಸದನದಲ್ಲಿ ಅಲ್ಪ ಸಂಖ್ಯಾತರ ಆಯೋಗದ ವರದಿ ಮಂಡಿಸಿಲ್ಲ.  ಮಂಾ.21 ರಂದು ಸದನದಲ್ಲಿ ಆಯೋಗದ ವರಕದಿ ಮಂಡಿಸದಿದ್ದರೇ ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತೇವೆ. ಕಾಂಗ್ರೆಸ್ ಮುಖಂಡರನ್ನ ರಕ್ಷಿಸುವ ಹುನ್ನಾರ ಸರ್ಕಾರ ಮಟ್ಟದಲ್ಲಿ ನಡೆದಿದೆ ಎಂದು ಈಶ್ವರಪ್ಪ ಆರೋಪಿಸಿದರು.

ವಿಧಾನ ಪರಿಷತ್ತಿನಲ್ಲಿ  ಸತ್ಯಕ್ಕೆ ದೂರವಾದ ಮಾಹಿತಿ ನೀಡಿ ಹಕ್ಕುಚ್ಯುತಿ ಎಸಗಿರುವ ಸಚಿವ ಖಮರುಲ್ಲಾ ಇಸ್ಲಾಂ ಅವರಿಗೆ ಛೀಮಾರಿ ಹಾಕಲು ಅವಕಾಶವಿದೆ ಎಂದು ವಿಧಾನ ಪರಿಷತ್ ಸದಸ್ಯ ಗೋ. ಮಧುಸೂದನ್ ತಿಳಿಸಿದರು.

SCROLL FOR NEXT