ಬೆಂಗಳೂರು: ನಿಮ್ಮ ಸರ್ಕಾರ ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸುತ್ತಿದೆ, ಹಾಗಾಗದಂತೆ ತಡೆಯಿರಿ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.
ಭ್ರಷ್ಟಾಚಾರ ವಿರುದ್ಧ ಹೋರಾಟಕ್ಕೆ ಬಲ ನೀಡುವ ಬದಲು ನಿಮ್ಮ ಕಾಂಗ್ರೆಸ್ ಸರ್ಕಾರವು ಲೋಕಾಯುಕ್ತದ ಸಾಮರ್ಥ್ಯ ಕುಗ್ಗಿಸಿ, ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸ್ಥಾಪಿಸಲು ಹೊರಟಿದೆ. ಇದಕ್ಕೆ ಅವಕಾಶ ಮಾಡಿಕೊಡಬೇಡಿ, ತಕ್ಷಣವೇ ಎಸಿಬಿ ರಚನೆಯಿಂದ ಹಿಂದಕ್ಕೆ ಸರಿಯುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಬೇಕು ಎಂದು ಕುಮಾರಸ್ವಾಮಿ ಅವರು ರಾಹುಲ್ ಗಾಂಧಿಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಲೋಕಾಯುಕ್ತ ದುರ್ಬಲಗೊಳಿಸಿ ಎಸಿಬಿ ರಚನೆ ಮಾಡಿರುವ ಸರ್ಕಾರದ ಕ್ರಮದ ವಿರುದ್ಧ ಪ್ರತಿಪಕ್ಷಗಳ ಹೋರಾಟ ಸದನದಲ್ಲಿ ಮುಂದುವರಿದಿದೆ.