ರಾಜಕೀಯ

ಶಾಸಕರಿಗೆ ವಿಧಾನಸೌಧದ ಮೊಗಶಾಲೆಯಲ್ಲಿ ಸಿಗಲಿದೆ ಫ್ರೀ ವೈಫೈ

Shilpa D

ಬೆಂಗಳೂರು:  ಬೆಳೆಯುತ್ತಿರುವ ಆಧುನಿಕ ತಂತ್ರಜ್ಞಾನಕ್ಕೆ ತಕ್ಕಂತೆ ಶಾಸಕರಿಗೂ ತಂತ್ರಜ್ಞಾನದ ಸೌಲಭ್ಯ ದೊರೆಯಬೇಕು ಎನ್ನುವ ಮನವಿಗೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಒಪ್ಪಿಗೆ ಕೊಟ್ಟಿದ್ದಾರೆ. ಸೋಮವಾರ ಸ್ಪೀಕರ್ ಕಾಗೋಡು ತಿಮ್ಮಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ, ವಿಧಾನಸಭೆ ಮೊಗಸಾಲೆಯಲ್ಲಿ ಶಾಸಕರಿಗೆ ವೈ ಫೈ ಸೌಲಭ್ಯ ಕಲ್ಪಿಸಲು ಒಪ್ಪಿಗೆ ಸಿಕ್ಕಿದೆ.

ಬಿಜೆಪಿ ಶಾಸಕ ಸುರೇಶ್ ಕುಮಾರ್ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಈ ಸಂಬಂಧ ಪತ್ರ ಬರೆದು ಶಾಸಕರಿಗೆ ವೈ ಫೈ ಸೌಲಭ್ಯ ಅಗತ್ಯವಿದೆ ಎಂದು ಮನವಿ ಮಾಡಿದ್ದರು. ವಿಧಾನಸಭೆ ಆಸುಪಾಸಿನಲ್ಲಿ ಜಾಮರ್ ಅಳವಡಿಸಿರುವುದರಿಂದ ಇಂಟರ್‌ನೆಟ್ ಸೌಲಭ್ಯ ದೊರೆಯುತ್ತಿಲ್ಲ. ಇದರಿಂದ ಶಾಸಕರ ದೈನಂದಿನ ವ್ಯವಹಾರಗಳಿಗೆ ಅಡಚಣೆ ಉಂಟಾಗುತ್ತಿದೆ ಎಂದು ಹೇಳಿದ್ದರು.

ಸೋಮವಾರ ನಡೆದ ಸಭೆಯಲ್ಲಿ ಈ ವಿಚಾರ ಮತ್ತೆ ಪ್ರಸ್ತಾಪಕ್ಕೆ ಬಂದಾಗ, ಮೊಬೈಲ್‌ನಿಂದ ಸದನದ ಕಲಾಪದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಆದರೆ, ಮೊಗಸಾಲೆಯಲ್ಲಿ ವೈ ಫೈ ಸೌಲಭ್ಯ ಕಲ್ಪಿಸಲು ಯಾವುದೇ ಅಡ್ಡಿಯಿಲ್ಲ. ಈ ಬಗ್ಗೆ ಸಾಧಕ-ಬಾಧಕಗಳನ್ನು ಪರಿಶೀಲಿಸಿ.  ಸೌಲಭ್ಯ ಕಲ್ಪಿಸಲು ತಾಂತ್ರಿಕ ತಜ್ಞರ ಜೊತೆ ಚರ್ಚೆ ನಡೆಸುವುದಾಗಿ ಸ್ಪೀಕರ್ ಭರವಸೆ ನೀಡಿದ್ದಾರೆ.

SCROLL FOR NEXT