ಸಿದ್ದರಾಮಯ್ಯ 
ರಾಜಕೀಯ

ಕೊಂಡ ಹಾಯುವ ಸಂಪ್ರದಾಯ ನಿಷೇಧಿಸಲು ಸರ್ಕಾರ ಚಿಂತನೆ: ಸಿದ್ದರಾಮಯ್ಯ

ಗ್ರಾಮೀಣ ಪ್ರದೇಶಗಳಲ್ಲಿ ನಡೆಸುವ 'ಕೆಂಡದ ಮೇಲೆ ನಡೆದಾಡುವ ಮಾರಕ' ಕೊಂಡ ಹಾಯುವ ಧಾರ್ಮಿಕ ಆಚರಣೆ ರಾಜ್ಯದಲ್ಲಿ ನಿಷೇಧಗೊಳ್ಳಲಿದೆ ಎಂದು ಮುಖ್ಯಮಂತ್ರಿ...

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ನಡೆಸುವ 'ಕೆಂಡದ ಮೇಲೆ ನಡೆದಾಡುವ ಮಾರಕ'  ಕೊಂಡ ಹಾಯುವ ಧಾರ್ಮಿಕ ಆಚರಣೆ ರಾಜ್ಯದಲ್ಲಿ ನಿಷೇಧಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ,

ತುಮಕೂರಿನ ಹೆತ್ತೇನಹಳ್ಳಿ ಶ್ರೀ ಆದಿಶಕ್ತಿ ಮಾರಮ್ಮ ದೇವಸ್ಥಾನದಲ್ಲಿ ನಡೆದ ಕೊಂಡ ಹಾಯುವ ಆಚರಣೆ ವೇಳೆ ಮೃತರು ಮತ್ತು ಗಾಯಗೊಂಡವರಿಗೆ ಪರಿಹಾರ ಹೆಚ್ಚಳ ಮಾಡಬೇಕು ಎಂಬ ವಿಪಕ್ಷಗಳ ಆಗ್ರಹವನ್ನು ತಿರಸ್ಕರಿಸಿ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೌಢ್ಯಾಚರಣೆಗೆ ಸಾಕ್ಷಿಯಾದ  ಕೊಂಡ ಹಾಯುವಂತಹ  ಆಚರಣೆಗಳಲ್ಲಿ ನಡೆದ ಅನಾಹುತಗಳಿಗೆ ಹೆಚ್ಚಿನ ಪರಿಹಾರವನ್ನು ನೀಡಲು ಸಾಧ್ಯವಿಲ್ಲ. ಒಂದು ವೇಳೆ ನೀಡಿದರೆ ಅದು ಪರೋಕ್ಷವಾಗಿ ಇಂತಹ ಆಚರಣೆಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಹೇಳಿದರು

ಹೆತ್ತೇನಹಳ್ಳಿಯ ಘಟನೆಯಲ್ಲಿ ಮೃತಪಟ್ಟ ಮೂವರ ಕುಟುಂಬಕ್ಕೆ 2 ಲಕ್ಷ ರೂ. ಗಾಯಗೊಂಡವರಿಗೆ 25,000 ರೂ., ಮತ್ತು ಸಣ್ಣ ಪುಟ್ಟ ಗಾಯಗೊಂಡವರಿಗೆ 10,000 ರೂ. ಪರಿಹಾರ ನೀಡಲಾಗಿದೆ. ಇದಕ್ಕಿಂತ ಹೆಚ್ಚಿನ ಪರಿಹಾರ ನೀಡಲು ಸಾಧ್ಯವಿಲ್ಲ ಎಂದರು. ಈ ಆಚರಣೆಯನ್ನು ನಿಷೇಧ ಮಾಡಿ ಎಂದು ಜೆಡಿಎಸ್‌ ಸದಸ್ಯರು ಆಗ್ರಹಿಸಿದಾಗ, ಆಯ್ತು, ಈ ಆಚರಣೆಯನ್ನು ರಾಜ್ಯದಲ್ಲಿ ನಿಷೇಧಿಸಲಾಗುವುದು ಎಂದು ಸಿಎಂ ಪ್ರಕಟಿಸಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!