ರಾಜಕೀಯ

ಜಿ.ಪಂ ಅಧ್ಯಕ್ಷರ ಆಯ್ಕೆ ವಿಚಾರ: ಮಂಡ್ಯದಲ್ಲಿ ಮತ್ತೆ ಜೆಡಿಎಸ್ ಭಿನ್ನಮತ ಸ್ಫೋಟ

Shilpa D

ಮಂಡ್ಯ: ಮಂಡ್ಯ ಜಿಲ್ಲಾ ಜೆಡಿಎಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಶಾಸಕ ಚೆಲುವರಾಯಸ್ವಾಮಿ ಮತ್ತು ಡಿ.ಸಿ ತಮ್ಮಣ್ಣ ನಡುವಿನ ಶೀತಲ ಸಮರ ಮತ್ತೊಮ್ಮೆ ಸ್ಫೋಟಗೊಳ್ಳಲು ಜಿಲ್ಲಾ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ವಿಚಾರ ಕಾರಣವಾಗಿದೆ.

ಶಾಸಕ ಡಿ.ಸಿ ತಮ್ಮಣ್ಣ ಅವರ ಮೇಲಿನ ದ್ವೇಷದಿಂದಾಗಿ ಚಾಮನಹಳ್ಳಿ ಸದಸ್ಯೆ ನಾಗರತ್ನ ಅವರಿಗೆ ವಂಚಿಸಲಾಗಿದೆ.  ಪ್ರೇಮಕುಮಾರಿ ಅವರನ್ನು ಅಧ್ಯಕ್ಷರಾನ್ನಾಗಿ ನೇಮಕ ಮಾಡಲಾಗಿದೆ ಎಂದು ಆರೋಪಿಸಿ ಕೆಲವು ಜೆಡಿಎಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ನಡೆದ ಚುನಾವಣೆಯಲ್ಲಿ ಪ್ರೇಮಕುಮಾರಿ ಅವರನ್ನು ಅಧ್ಯಕ್ಷೆಯನ್ನಾಗಿಯೂ, ಬೂಕನಕೆರೆ ಜಿಪಂ ಸದಸ್ಯೆ ಗಾಯತ್ರಿ ಎಂಬವರನ್ನು ಉಪಾಧ್ಯಕ್ಷೆಯಾಗಿಯೂ ಆಯ್ಕೆ ಮಾಡಲಾಗಿದೆ. ಅಧ್ಯಕ್ಷ ಗಾದಿಗೆ ಸಾಕಷ್ಟು ಪೈಪೋಟಿ ಇದ್ದ ಹಿನ್ನೆಲೆಯಲ್ಲಿ ಆಯ್ಕೆ ಪ್ರಕ್ರಿಯೆ ಕುತೂಹಲ ಕೆರಳಿಸಿತ್ತು. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೂ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡದ ಮಹಿಳೆಗೆ ಮೀಸಲಿಡಲಾಗಿತ್ತು.

ನನಗೂ ತಮ್ಮಣ್ಣ ಅವರಿಗೂ ವೈಯಕ್ತಿಕ ಭಿನ್ನಾಭಿಪ್ರಾಯ ಇರುವುದು ನಿಜ. ಆದರೆ  ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಆಯ್ಕೆ ವಿಚಾರಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ  ಎಂದು ನಾಗಮಂಗಲ ಶಾಸಕ ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಪ್ರೇಮಕುಮಾರಿ ಅವರು ಹಿರಿಯ ಸದಸ್ಯೆ. ಜಿಲ್ಲೆಯ ಎಲ್ಲಾ ಶಾಸಕರು, ಮಾಜಿ ಶಾಸಕರ ಒಪ್ಪಿಗೆ ಪಡೆದು ಆಯ್ಕೆ ಮಾಡಲಾಗಿದೆ ಎಂದು ಅವರು ಸಮಜಾಯಿಷಿ ನೀಡಿದ್ದಾರೆ.

SCROLL FOR NEXT