ಬೆಂಗಳೂರು: ಸುಮಾರು 38 ವರ್ಷಗಳ ನಂತರ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಅಧಿಕಾರ ಕಾಂಗ್ರೆಸ್ಕೈತಪ್ಪಿದ್ದು, 38 ವರ್ಷಗಳ ನಂತರ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಜಿಲ್ಲಾ ಪಂಚಾಯ್ತಿಯ ಅಧಿಕಾರ ದಕ್ಕಿದೆ.
ಇಂದು ನಡೆದ ಜಿಲ್ಲಾ ಪಂಚಾಯತ್ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಭರ್ಜರಿ ಜಯ ಸಾಧಿಸಿದ್ದು, ಅಧ್ಯಕ್ಷರಾಗಿ ಬಿಜೆಪಿಯ ಮುನಿರಾಜು ಹಾಗೂ ಉಪಾಧ್ಯಕ್ಷರಾಗಿ ಜೆಡಿಎಸ್ನ ಪಾರ್ವತಿ ಚಂದ್ರಪ್ಪ ಅವರು ಆಯ್ಕೆಯಾಗಿದ್ದಾರೆ.
ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ಮೈತ್ರಿಕೂಟಕ್ಕೆ 29 ಮತ ಲಭಿಸಿದ್ರೆ ಕಾಂಗ್ರೆಸ್ಗೆ 21 ಮತ ಲಭಿಸಿದೆ. ಒಟ್ಟಾರೆ 8 ಮತಗಳ ಅಂತರದಿಂದ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಆಡಳಿತರೂಢ ಕಾಂಗ್ರೆಸ್ ವಿರುದ್ಧ ಜಯಗಳಿಸಿದೆ.
ಅಧಿಕಾರಕ್ಕಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ನೊಂದಿಗೆ ಕೈಜೋಡಿಸಿದ್ದ ಜೆಡಿಎಸ್ ಇದೀಗ ಜಿಲ್ಲಾ ಪಂಚಾಯತ್ ನಲ್ಲಿ ಬಿಜೆಪಿಯೊಂದಿಗೆ ಕೈಜೋಡಿಸಿದೆ.