ಎಚ್ .ಡಿ ಕುಮಾರಸ್ವಾಮಿ 
ರಾಜಕೀಯ

ಜಾಗ್ವಾರ್ ಶೂಟಿಂಗ್ ನಲ್ಲಿ ಎಚ್ ಡಿಕೆ ಬ್ಯುಸಿ: ಬರ ಪ್ರವಾಸಕ್ಕೆ ನಾಯಕರಿಲ್ಲದೆ ಜೆಡಿಎಸ್ ಸಿಡಿಮಿಡಿ

ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಮಾತ್ರ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ, ಇದು ಸಹಜವಾಗಿಯೇ ಜೆಡಿಎಸ್ ಶಾಸಕರಲ್ಲಿ ಅಸಮಾಧಾನ ತಂದಿದೆ...

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ರಾಜ್ಯದ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ.

ಆದರೆ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಮಾತ್ರ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ, ಇದು ಸಹಜವಾಗಿಯೇ ಜೆಡಿಎಸ್ ಶಾಸಕರಲ್ಲಿ ಅಸಮಾಧಾನ ತಂದಿದೆ.

ಯಾವುದಾದರೊಂದು ಪ್ರಕರಣದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿ ತರಾಟೆಗೆ ತೆಗೆದುಕೊಳ್ಳುತ್ತಿದ್ದ ಮಾಜಿ ಸಿಎಂ ಎಚ್ ಡಿ ಕುಮಾರ ಸ್ವಾಮಿ ತಮ್ಮ ಮಗ ನಿಖಿಲ್ ಅಭಿನಯಿಸುತ್ತಿರುವ ದೊಡ್ಡ ಬಜೆಟ್ ಚಿತ್ರ ಜಾಗ್ವಾರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ ಕೇರಳ ವಿಧಾನ ಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಮಾಡುವಲ್ಲಿ ನಿರತವಾಗಿದ್ದಾರೆ. ಹೀಗಾಗಿ ರಾಜ್ಯದ ಬರ ಪೀಡಿತ ಪ್ರದೇಶಗಳ ಪ್ರವಾಸ ಕೈಗೊಳ್ಳಲು ಶಾಸಕರು ನಾಯಕತ್ವದ ಕೊರತೆ ಎದುರಿಸುತ್ತಿದ್ದಾರೆ.

ಮುಂದಿನ ವಿಜಯ ದಶಮಿಗೆ ಜಾಗ್ವಾರ್ ಚಿತ್ರ ಬಿಡುಗಡೆ ಮಾಡಲು ನಿರ್ಧರಿಸಿರುವ ಎಚ್ ಡಿ ಕೆ ಬಲ್ಗೇರಿಯಾ ಸೇರಿದಂತೆ ಯುರೋಪಿಯನ್ ದೇಶಗಳಲ್ಲಿ ಚಿತ್ರೀಕರಣ ನಡೆಸಲು ಸ್ಥಳ ಆಯ್ಕೆಗೆ ತೆರಳಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಮಂಬರುವ ವಿಧಾನ ಪರಿಷತ್ ಉಪ ಚುನಾವಣೆಗೆ ತಯಾರಿ ನಡೆಸುತ್ತಿವೆ. ಆದರೆ ಜೆಡಿಎಸ್ ನ ಇಬ್ಬರು ಪರಮೋಚ್ಚ ನಾಯಕರು ಚುನಾವಣೆಗಾಗಿ ಯಾವುದೇ ಸಿದ್ಧತೆ ನಡೆಸದಿರುವುದು, ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ.

ಮೂರು ಶಿಕ್ಷಕರ ಕ್ಷೇತ್ರ ಹಾಗೂ ಎರಡು ಪದವೀಧರರ ಕ್ಷೇತ್ರಕ್ಕೆ ಚುನಾವಣಾ ಆಯೋಗ ಶೀಘ್ರವೇ ಚುನಾವಣಾ ದಿನಾಂಕ ಘೋಷಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!