ಕಿರು ಪುಸ್ತಕ ಬಿಡುಗಡೆ ಮಾಡುತ್ತಿರುವ ಬಿಜೆಪಿ ನಾಯಕರು 
ರಾಜಕೀಯ

ಸಿದ್ದು ಸರ್ಕಾರದ ವೈಫಲ್ಯ ಕುರಿತು ಬಿಜೆಪಿಯಿಂದ ಕಿರು ಪುಸ್ತಕ ಬಿಡುಗಡೆ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವೈಫಲ್ಯದ ಕುರಿತು ಪ್ರತಿಪಕ್ಷ ಬಿಜೆಪಿ ಬುಧವಾರ 'ಇದು ಜನಪರ ಸರ್ಕಾರವಲ್ಲ,...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವೈಫಲ್ಯದ ಕುರಿತು ಪ್ರತಿಪಕ್ಷ ಬಿಜೆಪಿ ಬುಧವಾರ 'ಇದು ಜನಪರ ಸರ್ಕಾರವಲ್ಲ, ಜನ ವಿರೋಧಿ ಸರ್ಕಾರ' ಎಂಬ ಕಿರು ಪುಸ್ತಕವನ್ನು ಬಿಡುಗಡೆ ಮಾಡಿದೆ.
ಇಂದು ಸುದ್ದಿಗೋಷ್ಠಿಯಲ್ಲಿ ಕಿರು ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು, ಇಂತಹ ಕೆಟ್ಟ ಸರ್ಕಾರವನ್ನು ರಾಜ್ಯದ ಜನತೆ ಹಿಂದೆಂದೂ ನೋಡಿರಲಿಲ್ಲ ಎಂದು ಕಟುವಾಗಿ ಟೀಕಿಸಿದರು.
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ ಶೆಟ್ಟರ್, ಸಿದ್ದರಾಮಯ್ಯ ಮಹಾನ್ ಸುಳ್ಳುಗಾರ. ಈ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ನೆಲ ಕಚ್ಚಿದೆ. ಉತ್ತಮ ಆಡಳಿತದ ನಿರೀಕ್ಷೆಯಲ್ಲಿದ್ದ ರಾಜ್ಯದ ಜನತೆಗೆ ನಿರಾಶೆಯಾಗಿದೆ ಎಂದರು.
ಲೋಕಾಯುಕ್ತಕ್ಕೆ ಚರಮಗೀತೆ ಹಾಡಿದ ಕೀರ್ತಿ ಸಿದ್ದರಾಮಯ್ಯ ಸರ್ಕಾರಕ್ಕೆ ಸಲ್ಲಬೇಕು. ಆಡಳಿತದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಆಡಳಿತದ ಮೇಲೆ ಹಿಡಿತವಿಲ್ಲ. ಬಡವರ, ರೈತರ, ಅಲ್ಪಸಂಖ್ಯಾತರ ಪರ ಎಂಬುದು ಕೇವಲ ಘೋಷಣೆಯಾಗಿಯೇ ಉಳಿದಿದೆ ಎಂದರು,
ರಾಜ್ಯ ಸರ್ಕಾರ ಬರ ನಿರ್ವಹಣೆಯಲ್ಲೂ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕುಡಿಯುವ ನೀರಿಗೆ ಹಾಹಾಕಾರ ಇದೆ. ಕೇಂದ್ರ ಸರ್ಕಾರ ನೀಡಿರುವ ಬೆಳೆ ನಷ್ಟ ಪರಿಹಾರ ಸಂಪೂರ್ಣ ವಿತರಣೆಯಾಗಿಲ್ಲ. ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಹಿಂದೆ ವೀರಪ್ಪಮೊಯ್ಲಿಯವರಿಗೆ ಸುಳ್ಳುಗಾರ ಎಂಬ ಬಿರುದು ನೀಡಲಾಗಿತ್ತು. ಈಗ ಸಿದ್ದರಾಮಯ್ಯ ಮಹಾ ಸುಳ್ಳುಗಾರ ಎಂದು ಶೆಟ್ಟರ್ ವಾಗ್ದಾಳಿ ನಡೆಸಿದರೆ. ಅಲ್ಲದೆ ಸಿಎಂ ವಿರುದ್ಧವೇ ಎಸಿಬಿಯಲ್ಲಿ ದೂರು ದಾಖಲಾದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

ಥಾಣೆ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ - ವ್ಯಾನ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 11 ಮಂದಿ ಸಾವು

'ಡೊನಾಲ್ಡ್ ಟ್ರಂಪ್ ಜೊತೆ ಚರ್ಚೆ ಮಾಡುವ ಉದ್ದೇಶ ನನಗಿಲ್ಲ': ಪೋಪ್ ಲಿಯೋ XIV

ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿಗೆ CM ಗದ್ದುಗೆ! ನಾಳೆ ನಿತೀಶ್ ರಾಜೀನಾಮೆ? ನೂತನ ಮುಖ್ಯಮಂತ್ರಿ ಆಯ್ಕೆ ಸಾಧ್ಯತೆ

SCROLL FOR NEXT