ನವದೆಹಲಿ: ತಮ್ಮ ವಿರುದ್ಧ ಕಿರು ಪುಸ್ತಕ ಬಿಡುಗಡೆ ಮಾಡಿ, ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿಯಿಂದ ನಾನು ಪಾಠ ಕಲಿಯಬೇಕಾದ ಅಗತ್ಯ ಇಲ್ಲ ಎಂದರು.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪ್ರತಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರ ಇಡೀ ಕುಟುಂಬ ಭ್ರಷ್ಟಾಚಾರದಲ್ಲಿ ತೊಡಗಿತ್ತು ಎಂದು ತಿರುಗೇಟು ನೀಡಿದರು.
ನನಗೆ ಪಾಠ ಹೇಳುವ ನೈತಿಕತೆ ಬಿಜೆಪಿಯವರಿಗಿಲ್ಲ. ಅವರು ಅನಗತ್ಯವಾಗಿ ವಿವಾದ ಸೃಷ್ಟಿಸುತ್ತಿದ್ದಾರೆ. ನನ್ನನ್ನು ಮಜಾವಾದಿ ಎಂದು ಕರೆದಿದ್ದರು ಎಂದು ಸಿಎಂ ಬಿಜೆಪಿ ನಾಯಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಇಂದು ಬೆಳಗ್ಗೆ ರಾಜ್ಯ ಸರ್ಕಾರದ ವೈಫಲ್ಯದ ಕುರಿತು 'ಇದು ಜನಪರ ಸರ್ಕಾರವಲ್ಲ, ಜನ ವಿರೋಧಿ ಸರ್ಕಾರ' ಎಂಬ ಕಿರು ಪುಸ್ತಕವನ್ನು ಬಿಡುಗಡೆ ಮಾಡಿದ್ದ ಬಿಜೆಪಿ, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಶೆಟ್ಟರ್ ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics