ಬೆಳಗಾವಿ ಜಿ.ಪಂ.‘ಕೈ’ ವಶ: ಅಧ್ಯಕ್ಷೆಯಾಗಿ ಆಶಾ ಐಹೊಳೆ ಆಯ್ಕೆ
ರಾಜ್ಯದಲ್ಲಿಯೇ ಅತಿದೊಡ್ಡ ಜಿಲ್ಲಾ ಪಂಚಾಯಿತಿಯಾಗಿರುವ ಬೆಳಗಾವಿ ಜಿಲ್ಲಾ ಪಂಚಾಯಿತಿ 'ಕೈ' ವಶವಾಗಿದ್ದು, ಅಧ್ಯಕ್ಷೆಯಾಗಿ ಕಾಂಗ್ರೆಸ್ ನ ಆಶಾ ಐಹೊಳೆ ಹಾಗೂ...
ಬೆಳಗಾವಿ: ರಾಜ್ಯದಲ್ಲಿಯೇ ಅತಿದೊಡ್ಡ ಜಿಲ್ಲಾ ಪಂಚಾಯ್ತಿಯಾಗಿರುವ ಬೆಳಗಾವಿ ಜಿಲ್ಲಾ ಪಂಚಾಯಿತಿ 'ಕೈ' ವಶವಾಗಿದ್ದು, ಅಧ್ಯಕ್ಷೆಯಾಗಿ ಕಾಂಗ್ರೆಸ್ ನ ಆಶಾ ಐಹೊಳೆ ಹಾಗೂ ಉಪಾಧ್ಯಕ್ಷರಾಗಿ ಅರುಣ ಕಟಾಂಬಳೆ ಅವರು ಬುಧವಾರ ಆಯ್ಕೆಯಾಗಿದ್ದಾರೆ.
ಇಂದು ನಡೆದ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಅಥಣಿ ತಾಲೂಕಿನ ಉಗಾರ ಬಿಕೆ ಕ್ಷೇತ್ರದ ಆಶಾ ಐಹೊಳೆ ಅವರು 46 ಮತಗಳನ್ನು ಪಡೆದರೆ, ಬೆಳಗಾವಿ ತಾಲೂಕಿನ ಕಡೋಲಿ ಕ್ಷೇತ್ರದ ಅರುಣ ಕಟಾಂಬಳೆ 46 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.
ಬೆಳಗಾವಿ ಜಿಲ್ಲಾ ಪಂಚಾಯ್ತಿ ಒಟ್ಟು 90 ಸದಸ್ಯರನ್ನು ಹೊಂದಿದ್ದು, ಕಾಂಗ್ರೆಸ್ 43, ಬಿಜೆಪಿ 39, ಪಕ್ಷೇತರರು 6(ಎಂಇಎಸ್) ಹಾಗೂ ಇಬ್ಬರು ಜೆಡಿಎಸ್ ಸದಸ್ಯರು ಗೆದ್ದು ಬಂದಿರುವುದರಿಂದ ಅಧ್ಯಕ್ಷರಾಗಿ ಆಯ್ಕೆಯಾಗುವುದಕ್ಕೆ ಸ್ಪಷ್ಟ ಬಹುಮತವಿರಲಿಲ್ಲ. ಹೀಗಾಗಿ ಕಾಂಗ್ರೆಸ್ ಓರ್ವ ಪಕ್ಷೇತರ, ಇಬ್ಬರು ಜೆಡಿಎಸ್ ಸದಸ್ಯರು ಸೇರಿ ಮೂವರು ಸದಸ್ಯರ ಬೆಂಬಲ ಪಡೆದು ಜಿಲ್ಲಾ ಪಂಚಾಯ್ತಿ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ.
ಬಿಜೆಪಿಯಿಂದ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು ತಲಾ 39 ಮತ ಗಳಿಸಿ ಸೋಲು ಅನುಭವಿಸಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.