ಆರ್. ಅಶೋಕ್ 
ರಾಜಕೀಯ

ಬಿಬಿಎಂಪಿ: ಬಿಜೆಪಿ ಜೊತೆ ದೋಸ್ತಿಗೆ ಜೆಡಿಎಸ್ ಒಲವು?

ಮೂರು ತಿಂಗಳಲ್ಲಿ ಕಾಂಗ್ರೆಸ್ ಮೇಯರ್ ಅವಧಿ ಮುಕ್ತಾಯವಾಗಲಿದ್ದು, ಕಾಂಗ್ರೆಸ್ ಜೊತೆ ಮೈತ್ರಿ ಮುರಿದುಕೊಳ್ಳಲು ಜೆಡಿಎಸ್ ನಿರ್ಧರಿಸಿದೆ...

ಬೆಂಗಳೂರು: ಬೆಂಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನದ ಗದ್ದುಗೆ ಏರಿದ ನಂತರ ಬಿಬಿಎಂಪಿ ಮೇಲೆ ಸಂಪೂರ್ಣ ಹಿಡಿತ ಸಾಧಿಸಲು ಬಿಜೆಪಿ-ಜೆಡಿಎಸ್ ಹವಣಿಸುತ್ತಿವೆ. ಇನ್ನು ಮೂರು ತಿಂಗಳಲ್ಲಿ ಕಾಂಗ್ರೆಸ್ ಮೇಯರ್ ಅವಧಿ ಮುಕ್ತಾಯವಾಗಲಿದ್ದು, ಕಾಂಗ್ರೆಸ್ ಜೊತೆ ಮೈತ್ರಿ ಮುರಿದುಕೊಳ್ಳಲು ಜೆಡಿಎಸ್ ನಿರ್ಧರಿಸಿದೆ.

ಕಾಂಗ್ರೆಸ್ ಜೊತೆಗಿನ ಸಂಬಂಧ ಕಡಿದುಕೊಳ್ಳಲಿರುವ ಜೆಡಿಎಸ್, ತನ್ನ ಹಳೇ ದೋಸ್ತ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದ್ದರು ಅಧಿಕಾರದ ಗದ್ದುಗೆ ಏರಲು ಸಾಧ್ಯವಾಗಿರಲಿಲ್ಲ.

ಬೆಂಗಳೂರು ನಗರ ಮತ್ತು ತುಮಕೂರು ಜಿಲ್ಲಾ ಪಂಚಾಯಿತಿಗಳಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳನ್ನು ಜೆಡಿಎಸ್- ಬಿಜೆಪಿ ಹಂಚಿಕೊಂಡಿದ್ದು ಬಿಬಿಎಂಪಿಯಲ್ಲೂ ಈ ಮೈತ್ರಿ ಮುಂದುವರಿಸಲು ನಿರ್ಧರಿಸಿರುವುದಾಗಿ ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ತಿಳಿಸಿದ್ದಾರೆ.

ಮೈತ್ರಿ ಸಂಬಂಧ ಮಾತುಕತೆಗಳು ನಡೆದಿದ್ದು, ಜೆಡಿಎಸ್ ಕೂಡ ಆಸಕ್ತಿ ಹೊಂದಿರುವುದಾಗಿ ತಿಳಿಸಿರುವ ಅಶೋಕ್, ಬಿಬಿಎಂಪಿಯಲ್ಲಿ ಮತ್ತೆ ತಾವು ಅಧಿಕಾರ ಏರುವುದಾಗಿ ತಿಳಿಸಿದ್ದಾರೆ.

ಅಂದುಕೊಂಡಂತೆ ಮೈತ್ರಿ ಮಾತುಕತೆ ಫಲಪ್ರದವಾದರೇ ಬಿಜೆಪಿಗೆ ಮೇಯರ್ ಹಾಗೂ ಜೆಡಿಎಸ್ ಗೆ ಉಪಮೇಯರ್ ಸ್ಥಾನ ಲಭ್ಯವಾಗಲಿದೆ, ಜೊತೆಗೆ ಜೆಡಿಎಸ್ ಗೆ ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನಗಳನ್ನು ನೀಡುವ ಆಫರ್ ಕೊಡಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ಹಿಂದೆ ಬಿಬಿಎಂಪಿ ಮೈತ್ರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಸಿದ್ದರಾಗಿದ್ದರು. ಆದರೆ ಶಾಸಕರಾದ ಜಮೀರ್ ಅಹಮದ್ ಖಾನ್ ಮತ್ತ ಚಲುವರಾಯಸ್ವಾಮಿ ಅವರು ಮೀಸಲಾತಿಗಾಗಿ ಪಟ್ಟು ಹಿಡಿದಿದ್ದರಿಂದ ಆಗ ಮೈತ್ರಿ ಮಾಡಿಕೊಂಡು ಅಧಿಕಾರ ಪಡೆಯಲಾಗಲಿಲ್ಲ.

ಕಾಂಗ್ರೆಸ್ ಸಖ್ಯದಿಂದ ಬೇಸರಗೊಂಡಿರುವ ಜೆಡಿಎಸ್ ಶಾಸಕರು ಈದ ಮತ್ತೆ ಬಿಜೆಪಿ ಜೊತೆ ಸೇರಲು ಸಮ್ಮತಿಸಿರುವುದರಿಂದ ದೇವೇಗೌಡರು ಕೂಡ ಬಿಬಿಎಂಪಿ ಮೈತ್ರಿಗೆ ಗ್ರೀನ್ ಸಿಗ್ನಲ್ ತೋರಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಹಾಸನ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನ ಮೀಸಲಾತಿಯಿಂದಾಗಿ ತಮ್ಮ ಸೊಸೆ ಭವಾನಿ ರೇವಣ್ಣ ಕೈ ತಪ್ಪಿದ್ದರಿಂದ ಆಕ್ರೋಶಗೊಂಡಿರುವ ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡ ಬಿಜೆಪಿ ಜೊತೆ ಮೈತ್ರಿಗೆ ಒಪ್ಪಿದ್ದಾರೆ.

ಬಿಬಿಎಂಪಿಯಲ್ಲಿ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಷಯ ಇನ್ನೂ ಪಕ್ವವಾಗಿಲ್ಲ. ಇನ್ನೂ ಅಂತಿಮ ಹಂತದ ಮಾತುಕತೆಗಳು ನಡೆಯಬೇಕಿವೆ ಎಂದು ಜೆಡಿಎಸ್ ವಕ್ತಾರ ರಮೇಶ್ ಬಾಬು ಹೇಳಿದ್ದಾರೆ.  

ಶಿವಮೊಗ್ಗ ಹೊರತು ಪಡಿಸಿ ಉಳಿದ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಜಿಲ್ಲಾ ಪಂಚಾಯತ್ ಸದಸ್ಯರು ಆಸಕ್ತಿ ತೋರಿದ್ದರು. ಹೀಗಾಗಿ ಮೈತ್ರಿ ಮಾಡಿಕೊಳ್ಳಲಾಯಿತು. ಉಳಿದ ಜಿಲ್ಲಾ ಪಂಚಾಯತಿ ಕ್ಷೇತ್ರಗಳಲ್ಲಿ ಯಾರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕೆಂಬುದು ಸ್ಥಳೀಯ ಸಂಸ್ಥೆಗಳ ಸದಸ್ಯರಿಗೆ ಬಿಟ್ಟ ವಿಚಾರವಾಗಿದೆ ಎಂದು ರಮೇಶ್ ಬಾಬು ಸ್ಪಷ್ಟನೆ ನೀಡಿದ್ದಾರೆ.

ಕಾಂಗ್ರೆಸ್ ನಮ್ಮನ್ನು ಮುಗಿಸಲು ಯತ್ನಿಸುತ್ತಿದೆ, ನಮ್ಮ ಸಾಮರ್ಥ್ಯ ಏನು ಎಂಬುದನ್ನು ತೋರಿಸಬೇಕಿದೆ ಎಂದು ಹೇಳಿರುವ ಅವರು ಜಿಲ್ಲಾ ಪಂಚಾಯಿತಿಯಲ್ಲಿ ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಲು ಜೆಡಿಎಸ್ ಸದಸ್ಯರು ಹಾಗೂ ಕಾರ್ಯಕರ್ತರು ಒಲವು ತೋರಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!