ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಡಿನೋಟಿಫೈ ಪ್ರಕರಣ ಕುರಿತು ಸಲ್ಲಿಸಲಾಗಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸುವ ಸಂಬಂಧ ಜುಲೈ 7ಕ್ಕೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸುಪ್ರೀಂಕೋರ್ಟ್ ಹೇಳಿದೆ.
ಯುಡಿಯೂರಪ್ಪ ವಿರುದ್ಧ ಡಿನೋಟಿಫೈ ಪ್ರಕರಣ ಕುರಿತಂತೆ ಲೋಕಾಯುಕ್ತ ಪೊಲೀಸರು ಒಟ್ಟು 15 ಪ್ರಕರಣ ದಾಖಲಿಸಿದ್ದರು. ಸಿಎಜಿ ವರದಿ ಆಧರಿಸಿ ಎಫ್ ಐಆರ್ ದಾಖಲಿಸಲಾಗಿತ್ತು. ಲೋಕಾಯುಕ್ತ ದಾಖಲಿಸಿದ್ದ ಎಫ್ ಐಆರ್ ನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.
ಮೇಲ್ಮನವಿ ವಿಚಾರಣೆ ನಡೆಸುವುದರ ಬಗ್ಗೆ ಜುಲೈ 7ಕ್ಕೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸುಪ್ರೀಂಕೋರ್ಟ್ ಹೇಳಿದೆ.