ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಂತಿಮವಾಗಿ ಶನಿವಾರ ತನ್ನ ಅಭ್ಯರ್ಥಿಗಳನ್ನು ಪಟ್ಟಿಯನ್ನು ಪ್ರಕಟಿಸಿದೆ.
ವಿಧಾನಸಭೆಯಿಂದ ವಿಧಾನಪರಿಷತ್ತಿನ ಚುನಾವಣೆಯಲ್ಲಿ ಕಾಂಗ್ರೆಸ್ ನೇರವಾಗಿ ಗೆಲ್ಲಲು ಸಾಧ್ಯವಿರುವ ನಾಲ್ಕು ಸ್ಥಾನಗಳಿಗೆ ಆರ್.ಬಿ.ತಿಮ್ಮಾಪುರ, ರಿಜ್ವಾನ್ ಅರ್ಷದ್, ಅಲ್ಲಂ ವೀರಭದ್ರಪ್ಪ ಹಾಗೂ ವೀಣಾ ಅಚ್ಚಯ್ಯ ಅವರಿಗೆ ಟಿಕೆಟ್ ನೀಡಿದೆ.
ಇನ್ನು ವಿಧಾನ ಪರಿಷತ್ತಿಗೆ ನಾಮಕರಣ ಸದಸ್ಯರಾಗಿ ಖ್ಯಾತ ಸಾಹಿತಿ ಬರಗೂರು ರಾಮಚಂದ್ರಪ್ಪ, ಆಭರಣ ವ್ಯಾಪಾರಿ ಕೆ.ಪಿ. ನಂಜುಂಡಿ ಇವರ ಹೆಸರು ಅಂತಿಮಗೊಂಡಿದೆ ಎನ್ನಲಾಗಿದೆ.