ರಾಜಕೀಯ

ರಾಜ್ಯಸಭೆ ಚುನಾವಣೆ: ಜೆಡಿಎಸ್ ಅಭ್ಯರ್ಥಿಗೆ ಅಶೋಕ್ ಖೇಣಿ ಬೆಂಬಲ

Shilpa D

ಬೆಂಗಳೂರು: ನೈಸ್ ಯೋಜನೆ ವಿವಾದಲ್ಲಿ ಗೌಡರ ವಿರುದ್ಧ ಗುಡುಗುವ ಅಶೋಕ್ ಖೇಣಿ ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡಿದ್ದಾರೆ. ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ಉದ್ಯಮಿ ಬಿ.ಎಂ.ಫಾರೂಕ್ ಅವರಿಗೆ ಟಿಕೆಟ್ ನೀಡಿದೆ.

ಫಾರೂಕ್ ಅವರ ನಾಮಪತ್ರಕ್ಕೆ ಕರ್ನಾಟಕ ಮಕ್ಕಳ ಪಕ್ಷದ ಅಧ್ಯಕ್ಷ ಮತ್ತು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಅಶೋಕ್ ಖೇಣಿ ಅವರು ಸೂಚಕರಾಗಿ ಸಹಿ ಹಾಕಿದ್ದಾರೆ. ಚುನಾವಣೆಗೆ ನಾಮಪತ್ರ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಟ ಹತ್ತು ಜನ ಹಾಲಿ ಶಾಸಕರು ಸೂಚಕರಾಗಿ ಸಹಿ ಮಾಡಬೇಕು. ಫಾರೂಕ್ ಅವರ ನಾಮಪತ್ರಕ್ಕೆ ಖೇಣಿ ಸಹಿ ಹಾಕಿದ್ದು, ಅವರ ನಡೆ ರಾಜಕೀಯ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ.

ಉದ್ಯಮಿ ಬಿ.ಎಂ.ಫಾರೂಕ್ ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಎ.ಮೊಯಿದ್ದಿನ್ ಬಾವಾ ಅವರ ಸಹೋದರ. ಬೆಂಗಳೂರಿನ ಬ್ಯಾರೀಸ್ ವೆಲೆಧೀರ್ ಅಸೋಸಿಯೇಶನ್‌ನ ಅಧ್ಯಕ್ಷರು ಬಿ.ಎಂ.ಫಾರೂಕ್ ಇಂಜಿನಿಯರಿಂಗ್ ಶಿಕ್ಷಣ ಪಡೆದಿರುವ ಅವರು ಪವನ ವಿದ್ಯುತ್, ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ಅಲ್ಪಸಂಖ್ಯಾತರ ಬಗ್ಗೆ ಧ್ವನಿ ಎತ್ತಲು ಮತ್ತು ಅವರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅನುಕೂಲವಾಗುವಂತೆ ಅವರಿಗೆ ಟಿಕೆಟ್ ನೀಡಲಾಗಿದೆ.

SCROLL FOR NEXT