ಮೈಸೂರು: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ-ಜೆಡಿಎಸ್ ನ ಎರಡನೇ ಅಭ್ಯರ್ಥಿಗೆ ಸಂಬಂಧಿಸಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕ ಆರ್.ಅಶೋಕ್ ಮಾತುಕತೆ ನಡೆಸಿದ್ದಾರೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಕುಮಾರಸ್ವಾಮಿ ಮತ್ತು ಅಶೋಕ್ ನಡುವೆ ಯಾವುದೇ ಮಾತುಕತೆ ನಡೆದಿಲ್ಲ ಎಂದರು.
ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ನ ಎರಡನೇ ಅಭ್ಯರ್ಥಿ ಬಗ್ಗೆ ಇದುವರೆಗೂ ಯಾವುದೇ ಚರ್ಚೆ ನಡೆದಿಲ್ಲ. ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ 2ನೇ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ ಎಂದರು.
ಇದೇ ವೇಳೆ ರಾಜ್ಯ ಪೊಲೀಸರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, 'ರಾಜ್ಯ ಪೊಲೀಸರು, ನೌಕರರ ಪ್ರತಿಭಟನೆ ಹಿನ್ನೆಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸರು ಹಾಗೂ ನೌಕರರ ಜೊತೆ ಮಾತುಕತೆ ನಡೆಸಬೇಕಿತ್ತು. ಆದರೆ ಸಿಎಂ ಬೇಜಾವ್ದಾರಿತನವೇ ಸಮಸ್ಯೆಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics