ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ನಾನು ಮನೆ ಕಟ್ಟಿಸಿದ್ದು ಕುಮಾರಸ್ವಾಮಿಗೆ ನೋವು ತಂದಿದೆ: ಚಲುವರಾಯಸ್ವಾಮಿ ತಿರುಗೇಟು

ಹಲವು ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಜೆಡಿಎಸ್ ನಾಯಕರ ಒಳಜಗಳ ಬೀದಿಗೆ ಬಿದ್ದಿದೆ, ನಾನು ಮನೆ ಕಟ್ಟಿಸಿದ್ದು ಕುಮಾರಸ್ವಾಮಿ ಅವರಿಗೆ ತುಂಬಾ ನೋವು ತಂದಿದೆ ..

ಎಚ್.ಡಿಕುಮಾರಸ್ವಾಮಿ ಮತ್ತು ಚಲುವರಾಯಸ್ವಾಮಿ
Shilpa D
Updated On : 1 Jun 2016, 4:35 am

ಮಂಡ್ಯ: ಹಲವು ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಜೆಡಿಎಸ್ ನಾಯಕರ ಒಳಜಗಳ ಬೀದಿಗೆ ಬಿದ್ದಿದೆ. ಶಾಸಕ ಜಮೀರ್ ಅಹಮದ್ ಖಾನ್ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿದ್ದು, ಜೆಡಿಎಸ್ ವರಿಷ್ಠರಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ.

ಜೊತೆಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ನೀಡುವುದಿಲ್ಲವೆಂದು ಬಂಡಾಯ ನಾಯಕರು ಹೇಳಿಕೆ ನೀಡಿರುವುದು ಮಾಜಿ ಪ್ರಧಾನಿ ಎಚ್ .ಡಿ ದೇವಗೌಡ ಮತ್ತು ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರಿಗೆ ದೊಡ್ಡ ತಲೆ ನೋವಾಗಿದೆ.

ಈ ಬೆನ್ನಲ್ಲೇ ಕುಮಾರ ಸ್ವಾಮಿ ಅವರ ಹೇಳಿಕೆಗ ಶಾಸಕ ಚಲವರಾಯಸ್ವಾಮಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಮನೆ ಕಟ್ಟಿಸಿದ್ದು ಕುಮಾರಸ್ವಾಮಿ ಅವರಿಗೆ ತುಂಬಾ ನೋವು ತಂದಿದೆ. ಅವರಿಗೆ ಬೇಸರವಾಗುತ್ತದೆ ಎಂದು ಮೊದಲೇ ತಿಳಿದಿದ್ದರೇ ನಾನು ಸಣ್ಣ ಮನೆಯಲ್ಲೇ ವಾಸವಾಗಿರುತ್ತಿದ್ದೆ ತಿರುಗೇಟು ನೀಡಿದ್ದಾರೆ.

ನನ್ನಿಂದಲೇ ಪಕ್ಷ, ನಾನಿದ್ದರೆ ಮಾತ್ರ ಪಕ್ಷ ಅಂತ ನಾನು ಯಾವತ್ತೂ ಅಂದುಕೊಂಡಿರಲಿಲ್ಲ. ಕುಮಾರಸ್ವಾಮಿ, ದೇವೇಗೌಡರು ಇಳಿದಷ್ಟು ಕೆಳಮಟ್ಟಕ್ಕೆ ಇಳಿದು ನಾನು ಮಾತನಾಡಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಮೇ 30ರಂದು ಮಂಡ್ಯದಲ್ಲಿ ನಡೆದಿದ್ದ ಜೆಡಿಎಸ್ ಸಮಾರಂಭದಲ್ಲಿ ಮಾತನಾಡಿದ್ದ ಕುಮಾರಸ್ವಾಮಿ, ಅಷ್ಟೊಂದು ಹಣ ಇಟ್ಟುಕೊಂಡು ದೊಡ್ಡ ಮನೆ ಕಟ್ಟಿರುವ ಮುಖಂಡರು(ಚಲುವರಾಯಸ್ವಾಮಿ) ರೈತರು ಆತ್ಮಹತ್ಯೆ ಮಾಡಿಕೊಂಡಾಗ ಯಾಕೆ ಸಹಾಯ ಮಾಡಿಲ್ಲ.ಅವರಿಗೆ ಜನರು ಬೇಕಾಗಿಲ್ಲ. ನನ್ನಿಂದಲೇ ಈ ಜಿಲ್ಲೆ, ನಾನಿಲ್ಲದಿದ್ದರೆ ಪಕ್ಷ ಇಲ್ಲ ಎಂಬ ಭಾವನೆ ಹೊಂದಿದ್ದಾರೆ ಎಂದು ಪರೋಕ್ಷವಾಗಿ ವಾಗ್ದಾಳಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments