ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿ ಜೈಲು ಪಾಲಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕೆ.ಮರಿಗೌಡ ಅವರನ್ನು ಕಾಂಗ್ರೆಸ್ ನಿಂದ ಅಮಾನತು ಮಾಡಲಾಗಿದ್ದ ಆದೇಶವನ್ನು ಶುಕ್ರವಾರ ಹಿಂಪಡೆಯಲಾಗಿದೆ.
ಸಿಎಂ ಆಪ್ತ ಕೆ.ಮರಿಗೌಡ ಅವರ ಅಮಾನತು ಆದೇಶವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಎಸ್. ಎಸ್.ಬೋಸರಾಜು ಅವರು ಹಿಂಪಡೆದಿರುವುದಾಗಿ ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.
ಮೈಸೂರು ಜಿಲ್ಲಾಧಿಕಾರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಮೈಸೂರು ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕೆ.ಮರಿಗೌಡ ಅವರು ಜೈಲು ಪಾಲಾಗಿದ್ದರು. ಇದರಿಂದ ಮುಜುಗರಕ್ಕೊಳಗಾಗಿದ್ದ ಕಾಂಗ್ರೆಸ್, ಅವರನ್ನು ಪಕ್ಷದಿಂದ ಅಮಾನತು ಮಾಡಿತ್ತು.