ಜನಾರ್ದನ ರೆಡ್ಡಿ 
ರಾಜಕೀಯ

ಜನಾರ್ದನ ರೆಡ್ಡಿ ಮಗಳ ಮದುವೆಗೆ ಹೋಗೋದು ಬೇಡ: ರಾಜ್ಯ ಬಿಜೆಪಿಗೆ ಹೈಕಮಾಂಡ್ ಸೂಚನೆ

ರಾಜ್ಯ ಬಿಜೆಪಿ ನಾಯಕರು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮಗಳ ವಿವಾಹಕ್ಕೆ ಹೋಗುವುದು ಬೇಡ ಎಂದು ಬಿಜೆಪಿ ಹೈಕಮಾಂಡ್ ಸೂಚಿಸಿದೆ ಎಂದು...

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮಗಳ ವಿವಾಹಕ್ಕೆ ಹೋಗುವುದು ಬೇಡ ಎಂದು ಬಿಜೆಪಿ ಹೈಕಮಾಂಡ್ ಸೂಚಿಸಿದೆ ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರ ಕಪ್ಪುಹಣದ ವಿರುದ್ಧ ಹೋರಾಟ ನಡೆಸುತ್ತಿದೆ. ಇಂತಹ ಸಮಯದಲ್ಲಿ ಜನಾರ್ದನ ರೆಡ್ಡಿ ಪುತ್ರಿ ಬ್ರಹ್ಮಿಣಿಯ ಅದ್ಧೂರಿ ವಿವಾಹಕ್ಕೆ ಹೋಗುವುದು ಸರಿಯೇ ಎಂಬ ಮಾತುಗಳು ಕೇಳಿಬಂದಿದ್ದು, ಇದೀಗ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರಿಗೆ ಮದುವೆಗೆ ಹೋಗದಂತೆ ಸೂಚಿಸಿದೆ.

ಜನಾರ್ದನ ರೆಡ್ಡಿ ಅವರು ತಮ್ಮ ಮಗಳ ವಿವಾಹಕ್ಕೆ ಕಪ್ಪುಹಣ ಬಳಕೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸಹ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರೆಡ್ಡಿ ಮದುವೆಯಲ್ಲಿ ಭಾಗವಹಿಸಿದಂತೆ ಫರ್ಮಾನು ಹೊರಡಿಸಿದೆಯಂತೆ.

ನವೆಂಬರ್ 15 ಮತ್ತು 16ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬ್ರಹ್ಮಿಣಿ ಮದುವೆ ಅದ್ಧೂರಿಯಾಗಿ ನಡೆಯುತ್ತಿದ್ದು, ಮದುವೆ ಸುಮಾರು 500 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂಬ ಸುದ್ದಿಗಳು ವರದಿಯಾಗಿತ್ತು. ವಿವಾಹದ ಒಂದು ಲಗ್ನ ಪತ್ರಿಕೆಗೆ 2.50 ಲಕ್ಷ ರುಪಾಯಿ ವೆಚ್ಚ ಮಾಡಲಾಗಿತ್ತು ಎಂದು ಮಾದ್ಯಮಗಳು ವರದಿ ಮಾಡಿದ್ದವು. ಹೀಗೆ ಅದ್ಧೂರಿತನದಲ್ಲಿ ನಡೆಯುತ್ತಿರುವ ಮದುವೆಗೆ ಬಿಜೆಪಿ ನಾಯಕರು ಗೈರಾಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಕಡಿವಾಣ: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮನೆಗೆಲಸ ಮಾಡು, ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!