ರಮೇಶ್ ಜಾರಕಿಹೊಳಿ ಪುತ್ರನ ವಿವಾಹದಲ್ಲಿ ಪಾಲ್ಗೊಂಡಿದ್ದ ಸಚಿವ ಡಿ.ಕೆ ಶಿವಕುಮಾರ್ 
ರಾಜಕೀಯ

ಅಧಿವೇಶನದ ಬರ ಚರ್ಚೆಗೆ ಚಕ್ಕರ್: ಮದುವೆ ಸಮಾರಂಭಕ್ಕೆ ಶಾಸಕರ ಹಾಜರ್

ಬೆಳಗಾವಿಯ ಸುವರ್ಣಸೌಧದಲ್ಲಿ ನಿನ್ನೆ ಆರಂಭವಾದ ಚಳಿಗಾಲದ ಅಧಿವೇಶನದ ಮೊದಲ ದಿನ ಕೇವಲ ಕೆಲವೇ ಕೆಲವು ಶಾಸಕರು ಮಾತ್ರ ಸದನದಲ್ಲಿ ..

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಿನ್ನೆ ಆರಂಭವಾದ ಚಳಿಗಾಲದ ಅಧಿವೇಶನದ ಮೊದಲ ದಿನ ಕೇವಲ ಕೆಲವೇ ಕೆಲವು ಶಾಸಕರು ಮಾತ್ರ ಸದನದಲ್ಲಿ ಹಾಜರಿದ್ದರು.

ರಾಜ್ಯದಲ್ಲಿ ತಾಂಡವವಾಡುತ್ತಿರುವ ಬರ ಪರಿಹಾರ ಸಂಬಂಧ ಸದನದಲ್ಲಿ ಚರ್ಚಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಬೆಳಗಾವಿ ಉಸ್ತುವಾರಿ ಸಚಿವ ಹಾಗೂ ಸಣ್ಣ ಕೈಗಾರಿಕಾ ಖಾತೆ ಸಚಿವ ರಮೇಶ್ ಜಾರಕಿ ಹೊಳಿಪುತ್ರನ ಅದ್ಧೂರಿ ವಿವಾಹಕ್ಕೆ ಶಾಸಕರು ಹಾಜರಾಗಿದ್ದರು.

224 ಶಾಸಕರಲ್ಲಿ  ಕೇವಲ 182 ಶಾಸಕರು ಮಾತ್ರ ಹಾಜರಿ ಪುಸ್ತಕದಲ್ಲಿ ಸಹಿ ಮಾಡಿದ್ದರು. ಆದರೆ ಕೇವಲ 64 ಶಾಸಕರು ಮಾತ್ರ ಸದನದಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಆಡಂಭರದ ವಿವಾಹಗಳಿಗೆ ಹೋಗದಂತೆ ತಮ್ಮ ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು ಯಾರು ಅದಕ್ಕೆ ಸೊಪ್ಪು ಹಾಕಲಿಲ್ಲ.

ಪಕ್ಷದ ಗೆರೆ ದಾಟಿ ಸಕ್ಕರೆ ಉದ್ಯಮಿ ರಮೇಶ್ ಜಾರಕಿ ಹೊಳಿ ಪುತ್ರನ ವಿವಾಹಕ್ಕೆ ಹಾಜರಾಗಿದ್ದರು. ಉದ್ಯಮಿಗಳು ಹಾಗೂ ರಾಜಕಾರಣಿಗಳು ಸೇರಿದಂತೆ ಲಕ್ಷಾಂತರ ಮಂದಿಗೆ ರಮೇಶ್ ಜಾರಕಿಹೊಳಿ ಕೆಂಪು ಹಾಸು ಹಾಕಿ ಸ್ವಾಗತಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!