ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ಬಿಜೆಪಿ ಹಿಂದುಳಿದ ವರ್ಗಗಳ ಏಕತಾ ಮೋರ್ಚಾ ಸಮಾವೇಶದಲ್ಲಿ ಬಿ.ಎಸ್ ಯಡಿಯೂರಪ್ಪ ಅವರನ್ನ ಮುಂದಿನ ವಿಧಾನ ಸಭೆ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಎಂಬಂತೆ ಬಿಂಬಿಸಲಾಯಿತು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕಾರ್ಯಕ್ರಮದಲ್ಲಿ ಮಾತನಾಡುವಾಗ ಈ ಹಿಂದೆ ಸಿಎಂ ಆಗಿದ್ದಾಗ ಯಡಿಯೂರಪ್ಪನವರು ರಾಜ್ಯಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಹಾಡಿ ಹೊಗಳಿದರು.ಜೊತೆಗೆ ಕರ್ನಾಟಕದಲ್ಲಿ ಬಿಜೆಪಿ ಬೆಂಬಲಿಸಿ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ತಿಳಿಸಿದರು.
ನರೇಂದ್ರಮೋದಿ ಜಾರಿಗೆ ತಂದಿರುವ ಅನಾಣ್ಯೀಕರಣ ನೀತಿಯಿಂದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಮಮತಾ ಬ್ಯಾನರ್ಜಿಗೆ ರಾತ್ರಿ ಹೊತ್ತು ನಿದ್ದೆ ಬರುತ್ತಿಲ್ಲ ಎಂದು ಅಮಿತ್ ಶಾ ಟೀಕಿಸಿದ್ದಾರೆ.
ಇನ್ನು ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡಿದ್ದ ರ್ಯಾಲಿಯಿಂದಾಗಿ ನಿನ್ನೆ ಅರಮನೆ ಮೈದಾನದ ಸುತ್ತ ಮುತ್ತಲಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.