ಬೆಳಗಾವಿ: ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತಂದ ನಂತರವೇ ಮನೆಗೆ ಹೋಗುತ್ತೇನೆ. ಅಲ್ಲಿಯವರೆಗೂ ಮನೆಗೆ ಹೋಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.
ನಗರದ ಧರ್ಮನಾಥ ಭವನದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಬಿಎಸ್ ವೈ, ಬಿಜೆಪಿ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ವಹಿಸಿಕೊಂಡ ದಿನದಿಂದ ಮನೆಗೆ ಹೋಗಿಲ್ಲ. ಬಿಜೆಪಿಯನ್ನು ಅಧಿಕಾರಕ್ಕೆ ತಂದ ನಂತರವೇ ಮನೆಗೆ ಮರಳುತ್ತೇನೆ ಎಂದು ಪ್ರತಿಜ್ಞೆ ಮಾಡಿದರು.
ಪಕ್ಷದ ಸಂಘಟನೆಗಾಗಿ ಹಗಲು, ರಾತ್ರಿ ದುಡಿಯುತ್ತಿದ್ದೇನೆ. ಹಾಗಾಗಿ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತಂದ ನಂತರವೇ ಮನೆಗೆ ಮರಳುವುದಾಗಿ ಹೇಳುವ ಮೂಲಕ ಯಡಿಯೂರಪ್ಪ ಅವರು 2018ರ ವಿಧಾನಸಭೆ ಚುನಾವಣೆಗೆ ಕಹಳೆ ಮೊಳಗಿಸಿದ್ದಾರೆ.