ರಾಜನಾಥ್ ಸಿಂಗ್ ಸಮ್ಮುಖದಲ್ಲಿ ಶಿವರಾಂ ಬಿಜೆಪಿ ಸೇರ್ಪಡೆ
ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ ಅವರು ಶುಕ್ರವಾರ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಇಂದು ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜನಾಥ್ ಸಿಂಗ್ ಅವರು ಶಿವರಾಂಗೆ ಪಕ್ಷದ ಬಾವುಟ ನೀಡುವ ಮೂಲಕ ಬರಮಾಡಿಕೊಂಡರು.
ಅಧಿಕೃತವಾಗಿ ಬಿಜೆಪಿ ಸೇರಿದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಿವರಾಜ್, ದಲಿತರಿಗೆ ಕಿರುಕುಳ ನೀಡುತ್ತಿರುವುದು ಕಾಂಗ್ರೆಸ್. 69 ವರ್ಷಗಳಿಂದ ನಾವು ಕಾಂಗ್ರೆಸ್ ಮತಯಂತ್ರಗಳಾಗಿದ್ದೇವೆ. ಆದರೂ ದಲಿತರನ್ನು ಅಧಿಕಾರದಿಂದ ದೂರವಿಟ್ಟಿದೆ. ದಲಿತರನ್ನು ವಂಚಿಸುವ ಕಾಂಗ್ರೆಸ್ ನಮಗೆ ಬೇಕಾ? ಎಂದು ಪ್ರಶ್ನಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ.ಸದಾನಂದಗೌಡ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.