ಎಚ್.ಡಿ.ದೇವೇಗೌಡ 
ರಾಜಕೀಯ

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಮಾಜಿ ಪ್ರಧಾನಿ ದೇವೇಗೌಡ ವಿರೋಧ

ಮುಸ್ಲಿಮರಲ್ಲಿ ಜಾರಿಯಲ್ಲಿರುವ ತ್ರಿವಳಿ ತಲಾಖ್‌ ಗೆ ವಿರೋಧ ವ್ಯಕ್ತಪಡಿಸುವ ಮೂಲಕ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು...

ಮಂಗಳೂರು: ಮುಸ್ಲಿಮರಲ್ಲಿ ಜಾರಿಯಲ್ಲಿರುವ ತ್ರಿವಳಿ ತಲಾಖ್‌ ಗೆ ವಿರೋಧ ವ್ಯಕ್ತಪಡಿಸುವ ಮೂಲಕ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಆದರೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಇಂದು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ದೇವೇಗೌಡರು, ದೇಶದಲ್ಲಿ ಹಲವು ಧರ್ಮಗಳಿವೆ. ಎಲ್ಲ ಧರ್ಮಗಳಿಗೂ ಅದರದೇ ಆದ ನೀತಿ-ನಿಯಮಗಳಿವೆ. ಆದ್ದರಿಂದ ಏಕರೂಪ ನಾಗರಿಕ ಸಂಹಿತೆಯನ್ನು ನಾನು ತೀವ್ರವಾಗಿ ವಿರೋಧಿಸುತ್ತೇನೆ ಎಂದಿದ್ದಾರೆ.
ದೇಶದಲ್ಲಿ ಹಲವು ಸಮಸ್ಯೆಗಳಿವೆ. ರೈತರ ಆತ್ಮಹತ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಅಲ್ಲದೆ ಬೆಳೆಗಳಿಗೆ ಸರಿಯಾದ ಪ್ರಮಾಣದಲ್ಲಿ ಬೆಲೆ ಕೂಡ ದೊರೆಯುವುದಿಲ್ಲ. ಮೊದಲು ಈ ಸಮಸ್ಯೆಗಳಿಗೆ ಒತ್ತು ನೀಡಿ ಎಂದು ಹೇಳಿದ್ದಾರೆ.
ಜೆಡಿಎಸ್ ಪಕ್ಷವನ್ನು ಪುನರ್ ಸಂಘಟಿಸುವ ಉದ್ದೇಶದಿಂದ ಮಂಗಳೂರಿಗೆ ಬಂದಿದ್ದೇನೆ. ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಿದ ಬಳಿಕ, ದೇಶವ್ಯಾಪಿ ಸಂಘಟಿಸಲಾಗುವುದು. ನನಗೀಗ 84 ವರ್ಷ, ಆದರೆ ನನ್ನ 55 ವರ್ಷಗಳ ರಾಜಕೀಯ ಜೀವನದಲ್ಲಿ ಪ್ರಾದೇಶಿಕ ಪಕ್ಷ ಅತೀ ಮುಖ್ಯ ಎಂದು ಗ್ರಹಿಸಿದ್ದೇನೆ. ಈ ಹಿನ್ನೆಲೆಯಲ್ಲಿ ಪ್ರಾದೇಶಿ ನಾಯಕತ್ವವನ್ನು ಉಳಿಸಿ, ಬೆಳೆಸುವ ಕಾರ್ಯ ಆಗಬೇಕಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!