ಬೆಂಗಳೂರು: ಸಿದ್ದರಾಮಯ್ಯ ಒಬ್ಬ ಲಜ್ಜೆಗೆಟ್ಟ ಮುಖ್ಯಮಂತ್ರಿ. ಅವರಿಗೆ ಕಿಂಚಿತ್ತೂ ಮಾನ ಮರ್ಯಾದೆ ಇಲ್ಲ ಎಂದು ಬುಧವಾರ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ವಿನಾಶ ಕಾಲೇ ವಿಪರೀತ ಬುದ್ಧಿ ಎಂಬಂತೆ ಸಿಎಂ ವರ್ತಿಸುತ್ತಿದ್ದಾರೆ. ಇದು ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರಿಂದ ಸಾಬೀತಾಗಿದೆ. ಅವರು ಹೇಳಿರುವಂತೆ ಸಿದ್ದರಾಮಯ್ಯ ಕೈಬಿಸಿ ಮಾಡುವವರಿಗೆ ಮಾತ್ರ ಮಂತ್ರಿಗಿರಿ ನೀಡುತ್ತಾರೆ ಎಂದರು. ಅಲ್ಲದೆ ಒಂದೂವರೆ ವರ್ಷದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ ಎಂದರು.
ಬೆಂಗಳೂರಿನಲ್ಲಿ ನಡೆದ ಒಂಟಿ ಮಹಿಳೆಯರ ಹತ್ಯೆ ಪ್ರಕರಣಗಳನ್ನು ಪಟ್ಟಿ ಮಾಡುತ್ತೇವೆ. ರಾಜ್ಯ ಸರಕಾರ ಕರ್ನಾಟಕ ರಾಜ್ಯವನ್ನು ಕೇರಳ, ಬಿಹಾರ ಮಾಡಲು ಹೊರಟಿದೆ. ಇಂತಹ ಕೊಲೆಗಡುಕ ಸರಕಾರ ಅಧಿಕಾರದಲ್ಲಿರಬೇಕಾ ಎಂದು ಪ್ರಶ್ನಿಸಿದರು.
ಇದೇ ವೇಳೆ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದಲ್ಲಿ ಆರೋಪಿಗಳನ್ನು ಬಂಧಿಸದಿದ್ದರೆ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಮಾಜಿ ಸಿಎಂ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದ್ದಾರೆ.