ಸಿದ್ದರಾಮಯ್ಯ( ಸಂಗ್ರಹ ಚಿತ್ರ) 
ರಾಜಕೀಯ

ನಿಗಮ-ಮಂಡಳಿಯಲ್ಲಿ ಶಾಸಕರಿಗೆ ಸ್ಥಾನ : ಯುವರಾಜನ ಮನವೊಲಿಸಿದ ಸಿದ್ದರಾಮಯ್ಯ

ನಿಗಮ -ಮಂಡಳಿಗಳಲ್ಲಿ ಶಾಸಕರಿಗೆ ಸ್ಥಾನ ನೀಡುವಲ್ಲಿ ಹೈ ಕಮಾಂಡ್ ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ...

ಬೆಂಗಳೂರು: ನಿಗಮ -ಮಂಡಳಿಗಳಲ್ಲಿ ಶಾಸಕರಿಗೆ ಸ್ಥಾನ ನೀಡುವಲ್ಲಿ ಹೈ ಕಮಾಂಡ್ ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.

ಸಂಪುಡದಲ್ಲಿ ಸ್ಥಾನ ಸಿಗದೇ ವಂಚಿತರಾಗಿದ್ದ ಶಾಸಕರಿಗೆ ನಿಗಮ ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ನೀಡಿ, ಅವರ ಅಸಮಾಧಾನವನ್ನು ಸಿಎಂ ಸಿದ್ದರಾಮಯ್ಯ ಕಡಿಮೆ ಮಾಡಿದ್ದಾರೆ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿರುವ ನಿಷ್ಠಾವಂತ ಕಾರ್ಯಕರ್ತರಿಗೆ ನಿಗಮ -ಮಂಡಳಿಗಳಲ್ಲಿ ಸ್ಥಾನ ನೀಡಬೇಕು ಎಂದು ಹೈ ಕಮಾಂಡ್ ಆದೇಶಿಸಿತ್ತು. ಕಳೆದ ಬಾರಿ ಪಟ್ಟಿ ಸಿದ್ಧ ಮಾಡಿಕೊಂಡು ದೆಹಲಿಗೆ ಹೈ ಕಮಾಂಡ್ ಬಳಿ ಸಿಎಂ ತೆರಳಿದ್ದರು. ಆದರೆ ಯಾವ ಆಧಾರದ ಮೇಲೆ, ಪಟ್ಟಿ ಸಿದ್ದ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದ ರಾಹುಲ್ ಪಟ್ಟಿಯನ್ನು ತಿರಸ್ಕರಿಸಿದ್ದರು.

ಈ ಬಾರಿ ಸಿಎಂ ಸಿದ್ದರಾಮಯ್ಯ,ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಜೊತೆ ದೆಹಲಿಗೆ ತೆರಳಿದ್ದ ಸಿಎಂ ಕೊನೆಗೂ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ,

2018ರ ವಿಧಾನ ಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಹಿತದೃಷ್ಟಿಯಿಂದ 20 ಹಿರಿಯ ಶಾಸಕರಿಗೆ ನಿಗಮ ಮಂಡಳಿಗಳಲ್ಲಿ ಸ್ಥಾನ ನೀಡಿದರೇ ಹೆಚ್ಚಿನ ಲಾಭವಾಗುತ್ತದೆ ಎಂಬುದನ್ನು ಸಿಎಂ ರಾಹುಲ್ ಗಾಂಧಿಗೆ ಮನವರಿಕೆ ಮಾಡಿಕೊಟ್ಟ ಹಿನ್ನೆಲೆಯಲ್ಲಿ, ಹೈ ಕಮಾಂಡ್ ನಿಂದ ಪಟ್ಟಿಗೆ ಅಂತಿ ಮದ್ರೆ ಬಿದ್ದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!