ಬಿಎಸ್ ಯಡಿಯೂರಪ್ಪ 
ರಾಜಕೀಯ

ಕಾಂಗ್ರೆಸ್ ಒಡೆದ ಮನೆ, ದೇಶಪಾಂಡೆ ಸಹ ಸಿಎಂ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ: ಬಿಎಸ್ ವೈ

ಕಾಂಗ್ರೆಸ್ ಈಗ ಒಡೆದ ಮನೆಯಾಗಿದೆ. ಸಚಿವ ಆರ್.ವಿ.ದೇಶಪಾಂಡೆ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಸಮಾಧಾನ...

ಬೆಂಗಳೂರು: ಕಾಂಗ್ರೆಸ್ ಈಗ ಒಡೆದ ಮನೆಯಾಗಿದೆ. ಸಚಿವ ಆರ್.ವಿ.ದೇಶಪಾಂಡೆ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.
ಕಿಕ್ ಬ್ಯಾಕ್ ಪ್ರಕರಣದಲ್ಲಿ ಖುಲಾಸೆಗೊಂಡ ನಂತರ ಇಂದು ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಿಎಂ, ನನ್ನ ವಿರುದ್ಧ ವ್ಯವಸ್ಥಿತ ಪಿತೂರಿ ನಡೆದಿತ್ತು. ಕಿಕ್ ಬ್ಯಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ಕಾರ್ಯಕರ್ತರಲ್ಲಿ ಆತಂಕವಿತ್ತು. ಈಗ ಆ ಆತಂಕ ದೂರವಾಗಿದ್ದು, ಕಾರ್ಯಕರ್ತರಿಗೆ ಸಂತಸವಾಗಿದೆ ಎಂದರು.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಕಿಕ್ ಬ್ಯಾಕ್ ಪ್ರಕರಣದ ಬಗ್ಗೆ ವಿವರಣೆ ನೀಡುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ.
ಇದೇ ವೇಳೆ ಆಡಳಿತರೂಢ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಎಸ್ ವೈ, ಕಾಂಗ್ರೆಸ್ ಈಗ ಒಡೆದ ಮನೆಯಾಗಿದೆ. ಮಾಜಿ ಸಚಿವ ವಿ.ಶ್ರೀವಿನಾಸ್ ಪ್ರಸಾದ್ ಹಾಗೂ ಎಚ್.ವಿಶ್ವನಾಥ್ ಅವರು ಬಹಿರಂಗವಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದಾರೆ. ಇನ್ನೂ ಸಚಿವ ಆರ್.ವಿ.ದೇಶಪಾಂಡ ಸಹ ಸಿಎಂ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದರು.
ಮೈನಿಂಗ್ ಕಂಪನಿಗೆ ಪರವಾನಗಿ ನೀಡಲು ಕಿಕ್ ಬ್ಯಾಕ್ ಪಡೆದ ಪ್ರಕರಣ ಸಂಬಂಧ ಯಡಿಯೂರಪ್ಪ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದ್ದು, ಬಿಎಸ್ ವೈ ಸೈರಿದಂತೆ ಎಲ್ಲಾ 13 ಆರೋಪಿಗಳನ್ನು ಖುಲಾಸೆಗೊಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

ಬಿಹಾರದ ಯುವಕನ ಜೊತೆ ಪ್ರೀತಿ, ಮದುವೆಗೆ ಸಿದ್ಧತೆ; ತಾಯಿ ಸಲಹೆ ಬೆನ್ನಲ್ಲೇ ನಿರ್ಧಾರ ಬದಲಿಸಿದ ಬೆಂಗಳೂರು ಟೆಕ್ಕಿ.. ಆಗಿದ್ದೇನು?

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video