ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಸಿಬಿಐ ಕೋರ್ಟ್ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿದ ಮೇಲೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಿಷನ್-150 ಇನ್ ಕರ್ನಾಟಕ ಪ್ಲ್ಯಾನ್ ಗೆ ಎಲ್ಲಾ ರೀತಿಯ ಸಿದ್ಧತೆ ನಡೆಸುತ್ತಿದ್ದಾರೆ.
ಸಿಬಿಐ ಕ್ಲೀನ್ ಚಿಟ್ ನೀಡಿದ ಎರಡು ದಿನಗಳ ನಂತರ ದೆಹಲಿಗೆ ತೆರಳಿರುವ ಯಡ್ಯೂರಪ್ಪ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ರಾಜ್ಯದ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಹಾಗೂ ಮುಂದಿನ ವಿಧಾನ ಸಭೆ ಚುನಾವಣೆಗಳ ಬಗ್ಗೆ ಅಂಕಿ ಅಂಶಗಳ ಸಮೇತ ಮಾಹಿತಿ ನೀಡಿದ್ದಾರೆ.
ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಹಣಕಾಸು ಸಚಿವ ಅರುಣ್ ಜೈಟ್ಲಿ ಅವರನ್ನು ಸಹ ಯಡಿಯೂರಪ್ಪ ಭೇಟಿ ಮಾಡಲಿದ್ದಾರೆ.
ಇತ್ತೀಚೆಗೆ ಲಿಂಗಸುಗೂರಿನಲ್ಲಿ ನಡೆದ ಎಸ್ ಟಿ ರ್ಯಾಲಿಯ ಯಶಸ್ಸಿನ ನಂತರ ನವೆಂಬರ್ 27 ರಂದು ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ ಮೆಗಾ ರ್ಯಾಲಿ ನಡೆಸಲು ಯಡಿಯೂರಪ್ಪ ಸಿದ್ಧತೆ ನಡೆಸುತ್ತಿದ್ದಾರೆ. ರ್ಯಾಲಿ ಉದ್ದೇಶಿಸಿ ಮಾತನಾಡುವಂತೆ ಅಮಿತ್ ಶಾ ಗೆ ಯಡಿಯೂರಪ್ಪ ಆಹ್ವಾನ ನೀಡಿದ್ದಾರೆ.