ಡಾ. ಅಜಯ್ ಸಿಂಗ್ 
ರಾಜಕೀಯ

ನನ್ನ ಸಾವಿಗೆ ಜೇವರ್ಗಿ ಶಾಸಕ ಕಾರಣ: ಡೆತ್ ನೋಟ್ ಬರೆದಿಟ್ಟು ಆಪ್ ಕಾರ್ಯಕರ್ತ ಆತ್ಮಹತ್ಯೆ

ಜೇವರ್ಗಿ ಶಾಸಕ ಹಾಗೂ ಮಾಜಿಸಿಎಂ ಧರ್ಮಸಿಂಗ್ ಅವರ ಪುತ್ರನ ಹೆಸರನ್ನು ಡೆತ್ ನೋಟ್ ನಲ್ಲಿ ಬರೆದಿಟ್ಟು ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲ್ಲೂಕು ಆಮ್ ಆದ್ಮಿ ಪಾರ್ಟಿ...

ಶಹಾಪುರ: ಜೇವರ್ಗಿ ಶಾಸಕ ಹಾಗೂ ಮಾಜಿ ಸಿಎಂ ಧರ್ಮಸಿಂಗ್ ಅವರ ಪುತ್ರನ ಹೆಸರನ್ನು ಡೆತ್ ನೋಟ್ ನಲ್ಲಿ ಬರೆದಿಟ್ಟು ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲ್ಲೂಕು ಆಮ್ ಆದ್ಮಿ ಪಾರ್ಟಿ (ಎಎಪಿ) ಘಟಕದ ಅಧ್ಯಕ್ಷ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರ ಹೊರವಲಯದ ಸಿದ್ದಲಿಂಗೇಶ್ವರ ಬೆಟ್ಟದ ಸಮೀಪ  ನಡೆದಿದೆ.

ಜೇವರ್ಗಿಯ ಗಣೇಶ ಕೋಬಾಳಕರ್ (35) ಆತ್ಮಹತ್ಯೆ ಮಾಡಿಕೊಂಡವರು. ಮೃತನ ಬಳಿ ಡೆತ್‌ನೋಟ್ ಪತ್ತೆಯಾಗಿದ್ದು ನನ್ನ ಸಾವಿಗೆ ಜೇವರ್ಗಿ ಶಾಸಕ ಅಜಯ್‌ಸಿಂಗ್ ಅವರೇ ಕಾರಣ. ನನ್ನ ಕೊಲ್ಲಿಸಲು ಸುಫಾರಿ ಕೊಟ್ಟಿದ್ದಾರೆ.

ಎರಡು ದಿನಗಳ ಹಿಂದೆ ನನ್ನ ಅಪಹರಣ ಮಾಡಿದರು. ನಾನು ಅವರಿಂದ ತಪ್ಪಿಸಿಕೊಂಡು ಶಹಾಪುರಕ್ಕೆ ಬಂದೆ. ರಾಜಕೀಯದಲ್ಲಿ ಅವರ ಮುಂದೆ ನಾನು ಏನೂ ಅಲ್ಲ. ಅವರು ನನ್ನ ಮೇಲೆ ದ್ವೇಷ ತೀರಿಸಿಕೊಳ್ಳುತ್ತಿದ್ದಾರೆ  ಎಂದು ಬರೆಯಲಾಗಿದೆ.

ವಿಷಯ ತಿಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡೆತ್ ನೋಟ್ ತನಿಖೆಗಾಗಿ ಬೆಂಗಳೂರಿಗೆ ಕಳುಹಿಸುವುದಾಗಿ ಅವರು ಹೇಳಿದ್ದಾರೆ. ಇನ್ನೂ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಶಹಾಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಆದರೆ ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ, ನಾನು ಒಬ್ಬ ವೈದ್ಯ, ನನಗೆ ಪ್ರಾಣ ಉಳಿಸಲು ಪ್ರಯತ್ನ ಮಾಡುವುದು ಗೊತ್ತೆ ಹೊರತು ಪ್ರಾಣ ತೆಗೆಯಲು ಬರುವುದಿಲ್ಲ. ಆ ವ್ಯಕ್ತಿ ನನಗೆ ಪರಿಚಯವಿಲ್ಲ ಎಂದು ಶಾಸಕ ಡಾ. ಅಜಯ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆ ನೀಡಬೇಡಿ: ಪಕ್ಷ ನಿಮ್ಮ ಸೇವೆ ಮರೆಯಲ್ಲ; ಅಸಮಾಧಾನಿತ ಶಾಸಕರಿಗೆ ಬಿ.ಕೆ ಹರಿಪ್ರಸಾದ್ ಮನವಿ

ಕಾಂಗ್ರೆಸ್‌ ಲೆಟರ್‌ಹೆಡ್‌ನಲ್ಲಿ ಸ್ಪೀಕರ್‌ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್‌ ಕುಮಾರ್‌ ಕಿಡಿ

Gen Zಗಳಿಗೆ ಗುಡ್ ನ್ಯೂಸ್; ಪ್ರತಿಭಟನಾಕಾರರ ವಿರುದ್ಧದ ಪ್ರಕರಣ ಹಿಂಪಡೆದ ಗುಜರಾತ್ ಸರ್ಕಾರ

ಭಾರತದ ಅವಿತಿರುವ ತೈಲ ಸಂಪತ್ತು ಪತ್ತೆಗೆ ನೂತನ ಸಮುದ್ರ ಮಂಥನ! (ಜಾಗತಿಕ ಜಗಲಿ)