ದಿನೇಶ್ ಗುಂಡೂರಾವ್ 
ರಾಜಕೀಯ

ಕಾವೇರಿ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಬೇಡ: ದಿನೇಶ್ ಗುಂಡೂರಾವ್

ಕಾವೇರಿ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕೀಯ ಮಾಡುವುದು ಬೇಡ. ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸಲಿ ಎಂದು ಕರ್ನಾಟಕ ಪ್ರದೇಶ...

ಬೆಂಗಳೂರು: ಕಾವೇರಿ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕೀಯ ಮಾಡುವುದು ಬೇಡ. ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸಲಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಗುರುವಾರ ಹೇಳಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಗುಂಡೂರಾವ್, ನಮಗೆ ಸುಪ್ರೀಂಕೋರ್ಟ್ ನಲ್ಲಿ ತೀವ್ರ ಹಿನ್ನಡೆಯಾಗಿದೆ. ಕಾವೇರಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಧ್ಯಪ್ರವೇಶಕ್ಕೆ ಅವಕಾಶವಿದೆ. ಆದರೆ ಈ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶಕ್ಕೆ ಬಿಜೆಪಿ ಯಾಕೆ ಅಡ್ಡಿಪಡಿಸುತ್ತಿದೆ ಅಂತ ಗೊತ್ತಾಗುತ್ತಿಲ್ಲ ಎಂದರು.
ಈ ಹಿಂದೆ ನದಿ ನೀರು ಹಂಚಿಕೆ ವಿವಾದದಲ್ಲಿ ಪ್ರಧಾನಿ ಮಧ್ಯಸ್ಥಿಕೆ ವಹಿಸಿದ ಉದಾಹರಣೆ ಇದೆ. ಕಾವೇರಿ ವಿಚಾರದಲ್ಲಿ ಪ್ರಧಾನಿ ಮೋದಿ ಅವರ ನಡೆ ಸಂಶಯಕ್ಕೆ ಎಡೆ ಮಾಡಿಕೊಡುತ್ತಿದೆ. ಮಹದಾಯಿ ವಿಚಾರದಲ್ಲೂ ಪ್ರಧಾನಿ ನಮ್ಮ ಕೂಗಿಗೆ ಸ್ಪಂದಿಸಿಲ್ಲ. ಹಾಗಾಗಿ ಕಾವೇರಿ ವಿಚಾರದಲ್ಲೂ ಪ್ರಧಾನಿ ಅವರು ಸ್ಪಂದಿಸುವ ಲಕ್ಷಣ ಕಾಣಿಸುತ್ತಿಲ್ಲ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ತಾತ್ಸಾರದ ಭಾವನೆ ಹೊಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ 8 ಬಾರಿ ಪತ್ರ ಬರೆದಿದ್ದಾರೆ. ಆದರೆ ಪ್ರಧಾನಿ ಮೋದಿ ಅವರು ಸೌಜನ್ಯಕ್ಕೂ ಉತ್ತರ ನೀಡಿಲ್ಲ. ಪ್ರಧಾನಿ ಭೇಟಿಗೂ ಅವಕಾಶ ಕೊಡುತ್ತಿಲ್ಲ ಎಂದು ಗುಂಡೂರಾವ್ ದೂರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್