ಬಸವರಾಜ್ ರಾಯರೆಡ್ಡಿ 
ರಾಜಕೀಯ

ಕಾವೇರಿ ಗಲಾಟೆಯಲ್ಲಿ ಆರ್ಎಸ್ಎಸ್ ಕೈವಾಡ: ಪರಂ ಹೇಳಿಕೆಗೆ ರಾಯರೆಡ್ಡಿ ಸಮರ್ಥನೆ

ಕಳೆದ ಸೋಮವಾರ ನಡೆದ ಕಾವೇರಿ ಗಲಾಟೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ಎಸ್ಎಸ್) ಪಾತ್ರ ಇದೆ ಎಂಬ ಗೃಹ ಸಚಿವ ಪರಮೇಶ್ವರ...

ಬೆಂಗಳೂರು: ಕಳೆದ ಸೋಮವಾರ ನಡೆದ ಕಾವೇರಿ ಗಲಾಟೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ಎಸ್ಎಸ್) ಪಾತ್ರ ಇದೆ ಎಂಬ ಗೃಹ ಸಚಿವ ಪರಮೇಶ್ವರ ಅವರ ಹೇಳಿಕೆಯನ್ನು ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಅವರು ಶನಿವಾರ ಸಮರ್ಥಿಸಿಕೊಂಡಿದ್ದಾರೆ.
ಪರಮೇಶ್ವರ ಅವರು ಆಧಾರ ಇಲ್ಲದೆ ಯಾವುದೇ ಹೇಳಿಕೆಯನ್ನು ನೀಡುವುದಿಲ್ಲ. ಈ ಸಂಬಂಧ ಅವರಿಗೆ ಗುಪ್ತಚರ ಇಲಾಖೆಯಿಂದ ವರದಿ ಬಂದಿದೆ ಎಂದು ರಾಯರೆಡ್ಡಿ ಅವರು ತಿಳಿಸಿದ್ದಾರೆ.
ಕಾವೇರಿ ವಿಚಾರವಾಗಿ ಕಳೆದ ಸೋಮವಾರ ರಾಜ್ಯಾದ್ಯಂತ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿತ್ತು. ಬೆಂಗಳೂರಂತು ಅಕ್ಷರಶಃ ಬೆಂಕಿಯ ಕೆನ್ನಾಲಿಗೆಗೆ ನಲುಗಿತ್ತು. ಈ ಗಲಾಟೆಯಿಂದೆ ಆರ್‌ಎಸ್‌ಎಸ್ ಕೈವಾಡವಿರುವ ಅನುಮಾನವಿದೆ ಎಂದು ಪರಮೇಶ್ವರ್ ಹೇಳಿದ್ದರು.
ಪರಮೇಶ್ವರ ಅವರ ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು, ಗೃಹ ಸಚಿವರು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಈ ರೀತಿ ಆರೋಪಿಸುತ್ತಿದ್ದಾರೆ ಎಂದಿದ್ದಾರೆ. ಅಲ್ಲದೆ ಈ ಕೂಡಲೇ ಅವರು ಆರ್ಎಸ್ಎಸ್ ಕ್ಷಮೆಯಾಚಿಸಬೇಕು ಎಂದು ಶೆಟ್ಟರ್ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹತ್ವದ ಆದೇಶ: ಅಗತ್ಯವಿದ್ದರೆ ಆಕ್ರಮಣಕಾರಿ ಬೀದಿ ನಾಯಿಗಳನ್ನು ಕೊಲ್ಲಲು ಸುಪ್ರೀಂ ಕೋರ್ಟ್ ಅನುಮತಿ!

Ebola outbreak: ಮಾರಣಾಂತಿಕ ಎಬೋಲಾಗೆ 131 ಸಾವು, 500ಕ್ಕೂ ಹೆಚ್ಚು ಶಂಕಿತ ಕೇಸ್; ವಿಶ್ವಸಂಸ್ಥೆಯಿಂದ ತುರ್ತು ಪರಿಸ್ಥಿತಿ ಘೋಷಣೆ!

ದೇವಾಲಯಗಳ ಚಿನ್ನದ ಮೇಲೆ ಪ್ರಧಾನಿ ಮೋದಿ ಕಣ್ಣು?: ಕೇಂದ್ರ ಸರ್ಕಾರ ಹೇಳಿದ್ದೇನು?

ಮುಂದೆ ತುಂಬಾ ಕಠಿಣಾತಿಕಠಿಣ ದಿನಗಳು ಬರಲಿವೆ: ರಾಹುಲ್ ಗಾಂಧಿ ಎಚ್ಚರಿಕೆ

ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್ ಬ್ರೇಕ್: ಮೇ 20 ರಿಂದ ಮುಷ್ಕರ ನಡೆಸದಂತೆ ನಿರ್ಬಂಧ

SCROLL FOR NEXT