ರಾಜಕೀಯ

ಬಿಬಿಎಂಪಿ ಮೈತ್ರಿಯಲ್ಲಿ ನಮ್ಮದು ಪ್ರಮುಖ ಪಾತ್ರ: ಜಮೀರ್ ಆಹ್ಮದ್

Shilpa D

ಬೆಂಗಳೂರು: ಬಿಬಿಎಂಪಿ ಮೇಯರ್‌ ಚುನಾವಣೆಯಲ್ಲಿ ನಾವು ಪ್ರಮುಖ ಪಾತ್ರ ವಹಿಸಲಿದ್ದೇವೆ ಎಂದು ಜೆಡಿಎಸ್‌ ಬಂಡಾಯ ಶಾಸಕರಲ್ಲಿ ಒಬ್ಬರಾದ ಜಮೀರ್ ಅಹಮದ್ ಹೇಳಿದ್ದಾರೆ.

ಬಿಬಿಎಂಪಿಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಯಲ್ಲಿ ಮೇಯರ್ ಆಯ್ಕೆ ಸಂಬಂಧ ಮಾತನಾಡಿದ ಅವರು ಕೇವಲ 14 ಸದಸ್ಯರನ್ನು ಹೊಂದಿರುವ ಜೆಡಿಎಸ್‌ ಮೇಯರ್‌ ಹುದ್ದೆ ಕೇಳುವುದು ಸರಿ ಅಲ್ಲ. ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವುದು ಸೂಕ್ತ ಎಂದೂ ಅವರು ಅಭಿಪ್ರಾಯ ಪಟ್ಟಿದ್ದಾರೆ. ಜೊತೆಗೆ ಮುಸ್ಲಿಂ ಕಾರ್ಪೋರೇಟರ್ ಒಬ್ಬರನ್ನು ಉಪ ಮೇಯರ್ ಆಗಿ ನೇಮಕ ಮಾಡಬೇಕೆಂದು ಅವರು ಹೇಳಿದ್ದಾರೆ.

ಬೆಂಗಳೂರು ನಗರದ ಅಭಿವೃದ್ಧಿಗೆ ಕಳೆದ ಒಂದು ವರ್ಷದ ಅವಧಿಯಲ್ಲಿ ಹಲವು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷ, ಪಾಲಿಕೆಯಲ್ಲಿ ಅಧಿಕಾರ ಹಿಡಿದಿರುವ ಕಾರಣದಿಂದ ಇದು ಸಾಧ್ಯವಾಗಿದೆ.  ಅಲ್ಲದೆ,  ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಜೆಡಿಎಸ್‌ ಜತೆ ಮೈತ್ರಿ ಮುಂದುವರಿಸಬೇಕು ಎಂದು  ಪಾಲಿಕೆ ಸದಸ್ಯರು ಒತ್ತಾಯಿಸಿದರು ಎನ್ನಲಾಗಿದೆ..

ಇನ್ನೂ ಬಿಬಿಎಂಪಿಯಲ್ಲಿ ಮೈತ್ರಿ ಮುಂದುವರಿಸುವ ಕುರಿತು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಲಿದ್ದೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ತಿಳಿಸಿದರು. ಬಿಬಿಎಂಪಿಯಲ್ಲಿ ಜೆಡಿಎಸ್‌ ಜತೆ ಹೊಂದಾಣಿಕೆ ಮುಂದುವರಿಸುವಂತೆ ಪಾಲಿಕೆ ಸದಸ್ಯರು ಒಕ್ಕೊರಲಿನಿಂದ ಒತ್ತಾಯಿಸಿದರು ಎನ್ನಲಾಗಿದೆ.

SCROLL FOR NEXT