ಪತ್ನಿಗೆ ಭೂಮಿ ಮಂಜೂರು ಪ್ರಕರಣ: ಮಾಜಿ ಸಿಎಂ ಎಚ್ ಡಿಕೆಗೆ ಸಂಕಷ್ಟ
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸಂಕಷ್ಟ ಎದುರಾಗಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ...
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸಂಕಷ್ಟ ಎದುರಾಗಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕುಮಾರಸ್ವಾಮಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. .
ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ, ಅಂದರೇ 2011 ರಲ್ಲಿ ಕೋ ಆಪರೇಟಿವ್ ಸೊಸೈಟಿಗೆ ಭೂಮಿ ಮಂಜೂರಾತಿ ಮಾಡಲಾಗಿತ್ತು. ಈ ಸೊಸೈಟಿಯಲ್ಲಿ ಅನಿತಾ ಕುಮಾರಸ್ವಾಮಿ ಸದಸ್ಯೆಯಾಗಿದ್ದರು. ಅಲ್ಲದೆ ಅನಿತಾ ಅವರ ಆಸ್ತಿಯಲ್ಲಿ ಏರಿಕೆಯಾಗಿತ್ತು. ಆ ಅವಧಿಯಲ್ಲಾದ ಆಸ್ತಿ ಏರಿಕೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ ಎಂದು ಹೇಳಲಾಗಿದೆ..
ರಾಜ್ಯ ಹೈಕೋರ್ಟ್ ಈ ಪ್ರಕರಣವನ್ನು ರದ್ದುಗೊಳಿಸಿತ್ತು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಕೆಯಾಗಿದ್ದರ ಹಿನ್ನೆಲೆಯಲ್ಲಿ ಕುಮಾರ ಸ್ವಾಮಿ ಕೋರ್ಟ್ ಗೆ ಹಾಜರಾಗುವಂತೆ ಸೂಚಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.