ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜಕೀಯ

ಸಿಎಂ ಸಿದ್ದರಾಮಯ್ಯ ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆಗಳಲ್ಲಿ ಭಾಗಿ: ಶೋಭಾ ಕರಂದ್ಲಾಜೆ ಆರೋಪ

ಉಪಚುನಾವಣೆಯಲ್ಲಿ ರಾಜ್ಯದ ಪೊಲೀಸರು ರಾಜ್ಯ ಸರ್ಕಾರಕ್ಕೆ ಸಾಥ್ ನೀಡುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಣತಿಯಂತೆ ಕಾರ್ಯನಿರ್ವಹಿಸುತ್ತಿದ್ದಾರೆಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯವರು...

ಮೈಸೂರು: ಉಪಚುನಾವಣೆಯಲ್ಲಿ ರಾಜ್ಯದ ಪೊಲೀಸರು ರಾಜ್ಯ ಸರ್ಕಾರಕ್ಕೆ ಸಾಥ್ ನೀಡುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಣತಿಯಂತೆ ಕಾರ್ಯನಿರ್ವಹಿಸುತ್ತಿದ್ದಾರೆಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯವರು ಆರೋಪಿಸಿದ್ದಾರೆ. 
ಉಪಚುನಾವಣೆ ಪ್ರಚಾರ ಸಮಯದಲ್ಲಿ ಅಕ್ರಮಗಳು ನಡೆಯುತ್ತಿದ್ದು, ಈ ಬಗ್ಗೆ ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಬೇಕಿದೆ ಎಂದು ಚುನಾವಣಾ ಆಯೋಗದ ಅಧಿಕಾರಿ ಡಿ. ರಂದೀಪ್ ಅವರಿಗೆ ಮನವಿ ಪತ್ರ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಜಾಪ್ರಭುತ್ವ ವಿರೋಧಿ ಚಟುವಟಿಗೆಗಳಲ್ಲಿ ಭಾಗಿಯಾಗುತ್ತಿದ್ದಾರೆಂದು ಹೇಳಿದ್ದಾರೆ. 
ರಾಜ್ಯ ಪೊಲೀಸರು ಉಪ ಆಯುಕ್ತ ಡಿ ರಂದೀಪ್ ಅವರ ನಿರ್ದೇಶನದ ಮೇರೆಗೆ ಕಾರ್ಯನಿರ್ವಹಿಸುತ್ತಿಲ್ಲ. ಬದಲಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದಾರೆ. ಪೊಲೀಸರು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರಿಗೆ ಕಿರುಕುಳು ನೀಡುತ್ತಿದ್ದಾರೆ. ಮಾಜಿ ಸಚಿವ ಎಂ. ಮಹದೇವ ಪ್ರಸಾದ್ ಅವರು ಬಿಜೆಪಿಗೆ ಬೆಂಬಲ ನೀಡುತ್ತಿದ್ದಂತೆಯೇ ಅವರ ನಿವಾಸದ ಮೇಲೆ ಪೊಲೀಸರು ರೈಡ್ ಮಾಡಿದ್ದಾರೆ. 
ಕೂಡಲೇ ಸಿದ್ದರಾಮಯ್ಯ ಅವರು ಈ ಬಗ್ಗೆ ಸ್ಪಷ್ಟನೆ ನೀಡಬೇಕಿದೆ. ದಾಳಿ ವೇಳೆ ಪೊಲೀಸರು ಏನನ್ನು ವಶಕ್ಕೆ ಪಡೆದರು...? ಎಷ್ಟು ಬಾಟಲಿಗಳನ್ನು ಮಹದೇವ ಪ್ರಸಾದ್ ಅವರ ಮನೆಯಲ್ಲಿ ವಶಕ್ಕೆ ಪಡೆದುಕೊಂಡರು...? ರಾತ್ರಿ 9.30ರ ಸುಮಾರಿಗೆ ಪೊಲೀಸರು ಮೊಬೈಲ್ ಪಬ್ಲಿಸಿಟಿ ವ್ಯಾನ್ ನ್ನು ವಶಕ್ಕೆ ಪಡೆದುಕೊಂಡರು. ರಾತ್ರಿ 10 ಸುಮಾರಿಗೆ ಚುನಾವಣೆ ಆಯೋಗ ಪ್ರಚಾರಕ್ಕೆ ಅನುಮತಿ ನೀಡಿತು. 
ಸೆಕ್ಟರ್ ಆಫೀಸರ್ ಮಹೇಶ್ ಮತ್ತು ಮುಖ್ಯ ಪೇದೆ ಕೃಷ್ಣ ಅವರು ಜಿಲ್ಲಾ ಪಂಜಾಯತ್ ಸದಸ್ಯ ಮನಗಳ ಸೋಮಶೇಖರ್ ಅವರೊಂದಿಗಿ ಅನುಚಿತವಾಗಿ ವರ್ತಿಸಿದರು. ಸಚಿವ ರಮೇಶ್ ಜಾರಕಿಹೊಳಿಯವರು ಜನರಿಗೆ ಹಣ ನೀಡುತ್ತಿರುವುದನ್ನು ಬಿಜೆಪಿ ಕಾರ್ಯಕರ್ತರು ನೋಡಿದ್ದಾರೆ. ಅಷ್ಟೆಲ್ಲಾ ಅಕ್ರಮಗಳು ನಡೆಯುತ್ತಿದ್ದರೂ ಚುನಾವಣಾಧಿಕಾರಿ ಜಗದೀಶ್ ಮತ್ತು ಪೊಲೀಸ್ ಆಯುಕ್ತ ಸುಬ್ರಮಣಿಶ್ವರ ಅವರು ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video