ಕಾಂಗ್ರೆಸ್ ಸರ್ಕಾರ ಜಾತಿ ಆಧಾರದ ಮೇಲೆ ಸಮಾಜವನ್ನು ಒಡೆಯುತ್ತಿದೆ: ಯಡಿಯೂರಪ್ಪ
ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣಾ ರಂಗೇರಿದೆ. ಎರಡು ಪಕ್ಷಗಳ ಮುಖಂಡರು ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ...
ಮೈಸೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣಾ ರಂಗೇರಿದೆ. ಎರಡು ಪಕ್ಷಗಳ ಮುಖಂಡರು ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ಮುಳಗಿದ್ದಾರೆ.
ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆ ಫಲಿತಾಂಶ 2018ರ ವಿಧಾನಸಭೆ ಚುನಾವಣೆಯ ಟ್ರೆಂಡ್ ಸೆಟ್ಟರ್ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.
ನಂಜನಗೂಡು ಕ್ಷೇತ್ರದಲ್ಲಿ ಪ್ರಚಾರದ ನಂತರ ಮಾತಾನಾಡಿದ ಅವರು ಕಾಂಗ್ರೆಸ್ ಸರ್ಕಾರ ಸಮಾಜವನ್ನು ಒಡೆದು ಅಳುತಿದೆ. ಆದರೆ ಸಮಾಜದ ಎಲ್ಲಾ ಸಮುದಾಯಗಳೆಲ್ಲಾ ಒಟ್ಟಾಗಿ ಸೇರಿ, ಕರ್ನಾಟಕದ ಅಭಿವೃದ್ಧಿಗೆ ಜೊತೆಯಾಗಿ ಸಾಗುವುದು ಬಿಜೆಪಿ ಗುರಿ ಎಂದು ಅವರು ಹೇಳಿದ್ದಾರೆ.
ಮಾಜಿ ಸಿಎಂ, ಎಸ್.ಕೃಷ್ಣ, ಹಾಗೂ ದಲಿತ ಮುಖಂಡ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರ್ಪಡೆಯಿಂದ ಪಕ್ಷಕ್ಕೆ ಮತ್ತಷ್ಟ ಬಲಬಂದಂತಾಗಿದೆ ಎಂದು ಹೇಳಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.