ಪ್ರಚಾರದಲ್ಲಿ ತೊಡಗಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ 
ರಾಜಕೀಯ

ಬಿಜೆಪಿ ತಂತ್ರಗಾರಿಕೆ ರಾಜ್ಯದಲ್ಲಿ ನಡೆಯಲ್ಲ: ಸಿಎಂ ಸಿದ್ದರಾಮಯ್ಯ

2018ರ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೇಂದು ಪಣ ತೊಟ್ಟಿರುವ ಸಿಎಂ ಸಿದ್ದರಾಮಯ್ಯ ಅದಕ್ಕಾಗಿ ಈಗಾಗಲೇ ...

ಮೈಸೂರು: 2018ರ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೇಂದು ಪಣ ತೊಟ್ಟಿರುವ ಸಿಎಂ ಸಿದ್ದರಾಮಯ್ಯ ಅದಕ್ಕಾಗಿ ಈಗಾಗಲೇ ತಯಾರಿ ನಡೆಸಿದ್ದಾರೆ. 
ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿರುವ ಅವರು ತಮ್ಮ ನಾಲ್ಕು ದಶಕಗಳ ರಾಜಕೀಯ ಜೀವನವನ್ನು ಒರೆಗೆ ಹಚ್ಚಿದ್ದಾರೆ. ತಮ್ಮ ಅಭಿವೃದ್ಧಿ ಕೆಲಸಗಳ ಬಗ್ಗೆ ಭರವಸೆಯಿದ್ದು, ಅವು ತಮ್ಮನ್ನು ಕೈಹಿಡಿಯುತ್ತದೆ ಎಂಬು ಆತ್ಮವಿಶ್ವಾಸದಲ್ಲಿದ್ದಾರೆ.  ಪಾರದರ್ಶಕ ಆಡಳಿತ, ಬಸವಣ್ಣನವರ ಆದರ್ಶದಂತೆ ಎಲ್ಲರಿಗೂ ಸಾಮಾಜಿಕ ನ್ಯಾಯ ನೀಡಲು ಸರ್ಕಾರ ಬದ್ಧವಾಗಿದ್ದು, 2018 ರಲ್ಲಿ ಅಧಿಕಾರಕ್ಕೇರಬೇಕೆಂಬ ಬಿಜೆಪಿ ಕನಸು ನುಚ್ಚು ನೂರಾಗಲಿದೆ ಎಂದು ಅವರು ಹೇಳಿದ್ದಾರೆ. 
ಸದ್ಯ ಗುಂಡ್ಲಪೇಟೆ ಮತ್ತು ನಂಜನಗೂಡು ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಸಿಎಂ ತೊಡಗಿಸಿಕೊಂಡಿದ್ದಾರೆ. ಗುಂಡ್ಲುಪೇಟೆಯ ತೆರಕನಂಬಿಯಲ್ಲಿ ಚುನಾವಣಾ ಪ್ರಚಾರದ ನಂತರ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಅವರು, 2018ರ ವಿಧಾನ ಸಭೆ ಚುನಾವಣೆಗಾಗಿ ತಾವು ರೂಪಿಸುತ್ತಿರುವ ತಂತ್ರಗಾರಿಕೆ ಬಗ್ಗೆ ವಿವರ ನೀಡಿದರು. ಚುನಾವಣೆಗೆ ಆರು ತಿಂಗಳು ಇರುವ ವೇಳೆ ಪ್ರಚಾರ ಆರಂಭಿಸುವುದಾಗಿ ತಿಳಿಸಿದ್ದಾರೆ. 
ಉತ್ತರ ಪ್ರದೇಶ ಚುನಾವಣೆ ಗೆಲುವಿನ ಬಳಿಕ ಬಿಜೆಪಿ ಬೀಗುತ್ತಿದೆ. ಆದರೆ ಕರ್ನಾಟಕದಲ್ಲಿ ಬಿಜೆಪಿ ತಂತ್ರಗಾರಿಕೆ ಪ್ರಯೋಜನಕ್ಕೆ ಬಾರದು. ಕನ್ನಡಿಗರು ಯಾವಾಗಲು ಜಾತ್ಯಾತೀತ ಪಕ್ಷಗಳಿಗೆ ಬೆಂಬಲ ನೀಡುತ್ತಾರೆ ಎಂದು ಸಿಎಂ ತಿಳಿಸಿದ್ದಾರೆ.
ಹಲವು ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆಗೊಳ್ಳಲು ತಮ್ಮ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ, ಆದರೆ ಇದು ಕೇವಲ ಜನರಲ್ಲಿ ಗೊಂದಲ ಸೃಷ್ಟಿಸಲು ನೀಡುತ್ತಿರುವ ಹೇಳಿಕೆಗಳಾಗಿವೆ ಎಂದು ಟೀಕಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT