ಬೆಂಗಳೂರು: 2014ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ನಗರ ಜಿಲ್ಲೆಯನ್ನು ಕ್ಲೀನ್ ಸ್ವೀಪ್ ಮಾಡಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಸಂಸದರು ವಿಜಯಿಯಾಗಿದ್ದರು.
ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ವಿಜಯ ಪತಾಕೆ ಹಾರಿಸಿದ್ದರು. ಸದ್ಯ 2019ರ ಲೋಕಸಭೆ ಚುನಾವಣೆಯತ್ತ ಚಿತ್ತ ನೆಟ್ಟಿರುವ ಬಿಜೆಪಿ ಬೆಂಗಳೂರು ನಗರ ಜಿಲ್ಲೆಯ ನೆರೆ ಕ್ಷೇತ್ರಗಳಾದ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಗಳನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು ಹಂಬಲಿಸುತ್ತಿದೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಸಮೀಪದ ಅಂತರದಿಂದ ಸೋತಿದ್ದ ದೇಶಾದ್ಯಂತ 120 ಕ್ಷೇತ್ರಗಳನ್ನು ಕಳೆದುಕೊಂಡಿತ್ತು, ಹೀಗಾಗಿ ಅಂತಕ್ಷ ಕ್ಷೇತ್ರಗಳ ಮೇಲೆ ಬಿಜೆಪಿ ನಿಗಾ ವಹಿಸಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ಬಿಜೆಪಿ ರಾಷ್ಟ್ರೀಯ ನಾಯಕರು 8 ದಿನಗಳ ಪ್ರವಾಸ ನಡೆಸಲಿದೆ, ಏಪ್ರಿಲ್ 6 ರಿಂದ 14 ರವರೆಗೆ ಈ ಕಾರ್ಯಕ್ರಮ ನಡೆಯಲಿದೆ. ಬಿಜೆಪಿ ಮಿಷನ್ 120 ಕಾರ್ಯಕ್ರಮಕ್ಕೆ ರಾಜ್ಯದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ರಾಯಚೂರು ಜಿಲ್ಲೆಗಳು ಸೇರಿವೆ. ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರನ್ನು ನಿಯೋಜಿಸಲಾಗಿದೆ, ಅಮಿತ್ ಶಾ ಹೈದಾರಾಬಾದ್ ಗೆ, ರಾಜನಾಥ್ ಸಿಂಗ್ ಕೊಲ್ಕೋತಾ, ಮತ್ತು ನಿತಿನ್ ಗಡ್ಕರಿ ಉತ್ತರ ಪ್ರದೇಶದಲ್ಲಿ ಈ ವಾರ ಕಾರ್ಯಕ್ರಮ ಆಯೋಜಿಸಲಿದ್ದಾರೆ.
ಸದ್ಯ ರಾಜ್ಯ ಬಿಜೆಪಿ ನಾಯಕರು ಉಪ ಚುನಾವಣೆ ಪ್ರಚಾರದಲ್ಲಿ ಮಗ್ನರಾಗಿರುವುದರಿಂದ ಏಪ್ರಿಲ್ 13 ರ ನಂತರ ಅರುಣ್ ಜೇಟ್ಲಿ ಬೆಂಗಳೂರಿಗೆ ಆಗಮಿಸಲಿದ್ದಾರೆ. 2019ರ ಲೋಕಸಭೆ ಚುನಾವಣೆಗೆ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾರ್ಯತಂತ್ರ ರೂಪಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics