ರಾಜಕೀಯ

ಹಣ ಹಂಚಿಕೆ ಆರೋಪ: ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಚುನಾವಣಾಧಿಕಾರಿಗೆ ಬಿಜೆಪಿ ದೂರು

Lingaraj Badiger
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಗುರುವಾರ ಗುಂಡ್ಲುಪೇಟೆಯಲ್ಲಿ ಮತದಾರರಿಗೆ ಹಣ ಹಂಚಿದ್ದು, ಅವರ ವಿರುದ್ದ ಕ್ರಮ ಕೈಗೊಳ್ಳುವಂತೆ ಬಿಜೆಪಿ ಶುಕ್ರವಾರ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದೆ.
ಬಿಜೆಪಿ ಶಾಸಕ ವಿಜಯಕುಮಾರ್ ನೇತೃತ್ವದ ನಿಯೋಗ ಇಂದು ನಗರದ ಶೇಷಾದ್ರಿ ರಸ್ತೆಯಲ್ಲಿರುವ ಮುಖ್ಯ ಚುನಾವಣಾಧಿಕಾರಿ ಅನಿಲ್‌ಕುಮಾರ್ ಝಾ ಅವರ ಕಚೇರಿಗೆ ತೆರಳಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ದೂರು ನೀಡಿದರು.
ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗುಂಡ್ಲುಪೇಟೆ ಕ್ಷೇತ್ರದಲ್ಲಿ ಮತದಾರರಿಗೆ ಹಣ ಹಂಚುತ್ತಿರುವ ವಿಡಿಯೋವನ್ನು ಉಲ್ಲೇಖಿಸಿ ಬಿಜೆಪಿ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದು, ಕಾಂಗ್ರೆಸ್‌ನ ಮಹಿಳಾ ಮುಖಂಡರು ಹಣ ಹಂಚುತ್ತಿರುವುದು ಸ್ಪಷ್ಟವಾಗಿರುವುದರಿಂದ ಅವರ ವಿರುದ್ದ ಕ್ರಮ ಕೈಗೊಳ್ಳುವಂತೆಯೂ ನಿಯೋಗ ಮನವಿ ಮಾಡಿದೆ.
ಇದೇ ವೇಳೆ ಗುಂಡ್ಲುಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಚುನಾವಣಾ ಅಕ್ರಮಗಳನ್ನು ನಡೆಸಲು ಪ್ರಯತ್ನ ನಡೆಸಿದ್ದು, ಇಲ್ಲಿ ಚುನಾವಣಾ ಕಾರ್ಯಗಳಿಗೆ ಅರೆಸೇನಾ ಸಿಬ್ಬಂದಿಯನ್ನು ನಿಯೋಜನೆ ಮಾಡುವಂತೆಯೂ ಬಿಜೆಪಿ ನಿಯೋಗ ಚುನಾವಣಾಧಿಕಾರಿಗಳಿಗೆ ಮನವಿ ಮಾಡಿದೆ.
SCROLL FOR NEXT