ರಾಜಕೀಯ

ಉಪ ಚುನಾವಣೆ ಫಲಿತಾಂಶ: ಪಕ್ಷದ ಮೇಲೆ ಮತ್ತಷ್ಟು ಹಿಡಿತ ಸಾಧಿಸಿದ ಸಿದ್ದರಾಮಯ್ಯ

Shilpa D
ಮೈಸೂರು: ನಂಜನಗೂಡು- ಗುಂಡ್ಲುಪೇಟೆ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯ ಸಾಧಿಸಿದೆ. ಈ ಮೂಲಕ ಪಕ್ಷದೊಳಗೆ ಹಾಗೂ ಪಕ್ಷದ ಹೊರಗಿನ ತಮ್ಮ  ವಿರೋಧಿಗಳಿಗೆ ಪ್ರಬಲ ಸಂದೇಶ ನೀಡಿದ್ದಾರೆ.
ತಮ್ಮ ಆಡಳಿತ ವೈಖರಿ ಬಗ್ಗೆ ಟೀಕಿಸುತ್ತಿದ್ದವೆರಲ್ಲರಿಗೂ ಉಪ ಚುನಾವಣೆ ಫಲಿತಾಂಶದ ಮೂಲಕ ಸಿದ್ದರಾಮಯ್ಯ ಮೌನವಾಗಿಸಿದ್ದಾರೆ.
2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿತ್ತು. ಹೆಬ್ಬಾಳ ಮತ್ತು ಬಿಬಿಎಂಪಿ ಚುನಾವಣೆಗಳಲ್ಲಿ ಮತ್ತೆ ಕಾಂಗ್ರೆಸ್ ಪಕ್ಷದ ಗೆಲುವಿಗೆ ಕಾರಣರಾಗಿದ್ದರು. ಕಾಂಗ್ರೆಸ್ ಪಕ್ಷ ಮತ್ತೆ ಸದೃಢಗೊಳ್ಳಲು ಸಿಎಂ ಸಿದ್ದರಾಮಯ್ಯ ಕಾರಣ ಎಂಬ ಭರವಸೆ ಮೂಡಿಸಿದ್ದರು.
ಪಂಜಾಬ್ ನಲ್ಲಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಜಯಗಳಿಸಿ ಸಿಎಂ ಗಾದಿಗೇರಿದ್ದಾರೆ. ಅಕಾಲಿದಳ ಮತ್ತು ಬಿಜೆಪಿ ಸಮ್ಮಿಶ್ರ ಸರ್ಕಾರದ ಜನವಿರೋಧಿ ನೀತಿಗಳು ಅಮರಿಂದರ್ ಸಿಂಗ್  ಅವರನ್ನು ಮತ್ತೆ ಅಧಿಕಾರಕ್ಕೆ ತರುವಲ್ಲಿ ಸಹಾಯವಾಯಿತು. ಆದರೆ ಕರ್ನಾಟಕದಲ್ಲಿ ಆ ಪರಿಸ್ಥಿತಿಯಿಲ್ಲ.
ರಾಜ್ಯದಲ್ಲಿ ಪಕ್ಷದಲ್ಲಿ ಮತ್ತಷ್ಟು ಹಿಡಿತ ಸಾಧಿಸಬೇಕೆಂದು ಹವಣಿಸುತ್ತಿರುವ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆ ಮತ್ತು ಪಕ್ಷ ಪುನರ್ ಸಂಘಟಿಸಲು ಮಾಡಲು ನಿರ್ಧರಿಸಿದ್ದಾರೆ. 
ಸಚಿವ ಸಂಪುಟ ವಿಸ್ತರಿಸಲು ಯೋಚಿಸಿರುವ ಸಿಎಂ ಇಬ್ಬರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಿದ್ದಾರೆ. ಗುಂಡ್ಲುಪೇಟೆಯಿಂದ ಗೆಲುವು ಸಾಧಿಸಿರುವ ಮಹದೇವ ಪ್ರಸಾದ್ ಅವರ ಪತ್ನಿ ಗೀತಾ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಲು ಸಿಎಂ ಒಲವು ತೋರಿದ್ದಾರೆ. ಸದ್ಯ ಸಿಎಂ ಅವರನ್ನು ಸೇರಿ 32 ಮಂದಿ ಸಂಪುಟದಲ್ಲಿದ್ದಾರೆ.
2018ರ ವಿಧಾನ ಸಭೆ ಚುನಾವಣೆಗೆ ಕೆಪಿಸಿಸಿಗೆ ಹೊಸ ಅಧ್ಯಕ್ಷರು ಬೇಕೆಂಬ ನಿರೀಕ್ಷೆಯಲ್ಲಿದ್ದಾರೆ. ಜಿ.ಪರಮೇಶ್ವರ ಕೆಪಿಸಿಸಿ ಅಧ್ಯಕ್ಷರಾಗಿ ಈಗಾಗಲೇ 7 ವರ್ಷ ಪೂರೈಸಿದ್ದಾರೆ. ಜೊತೆಗೆ ಗೃಹ ಸಚಿವಾಲಯದ ಹೊಣೆ ಕೂಡ ಅವರ ಮೇಲಿದೆ.
ಸಚಿವ ಸ್ಥಾನಕ್ಕೆ ಪರಮೇಶ್ವರ್ ರಾಜಿನಾಮೆ ನೀಡಿ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ, ಇಂದು ಪರಮೇಶ್ವರ್ ಮತ್ತು ಸಿದ್ದರಾಮಯ್ಯ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಲಿದ್ದು, ಈ ಸಂಬಂಧ ಚರ್ಚಿಸಲಿದ್ದಾರೆ.
SCROLL FOR NEXT