ಎಚ್.ಡಿ.ಕುಮಾರಸ್ವಾಮಿ 
ರಾಜಕೀಯ

ಕಾಂಗ್ರೆಸ್, ಬಿಜೆಪಿಗೆ ಆಡಳಿತ ನೀಡಿದ್ದೀರಿ, ನನಗೂ ಒಂದು ಅವಕಾಶ ನೀಡಿ: ರಾಜ್ಯದ ಜನತೆಗೆ ಎಚ್ ಡಿಕೆ ಮನವಿ

ಕಾಂಗ್ರೆಸ್ ಹಾಗೂ ಬಿಜೆಪಿ ಅಧಿಕಾರ ನಡೆಸಲು ಅವಕಾಶ ನೀಡಿದ್ದೀರಿ, ನನಗೂ ಒಂದು ಪೂರ್ಣಾವಧಿಯ ಅಧಿಕಾರ ನೀಡಿ ಎಂದು...

ಬೆಂಗಳೂರು: ಕಾಂಗ್ರೆಸ್ ಹಾಗೂ ಬಿಜೆಪಿ ಅಧಿಕಾರ ನಡೆಸಲು ಅವಕಾಶ ನೀಡಿದ್ದೀರಿ, ನನಗೂ ಒಂದು ಪೂರ್ಣಾವಧಿಯ ಅಧಿಕಾರ ನೀಡಿ ಎಂದು ರಾಜ್ಯದ ಜನತೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ಮನವಿ ಮಾಡಿದ್ದಾರೆ.
ಇಂದು ನಗರದ ಜ್ಞಾನಜೋತಿ ಸಭಾಂಗಣದಲ್ಲಿ ನಡೆದ ಕುಮಾರಪಥ 2018, ಚಿಂತನ ಮಂಥನ ಕಾರ್ಯಕ್ರಮದಲ್ಲಿ ನೀವು ಅಧಿಕಾರಕ್ಕೆ ಬಂದರೆ ಏನು ಮಾಡುತ್ತೀರಿ ಎಂಬ ಜನರ ಪ್ರಶ್ನೆಗಳಿಗೆ ಉತ್ತರಿಸಿದ ಕುಮಾರಸ್ವಾಮಿ, ನಾನು ಅಧಿಕಾರಕ್ಕೆ ಬಂದರೆ ಕೃಷಿ, ನೀರಾವರಿ ಹಾಗೂ ಉದ್ಯೋಗ ಸೃಷ್ಟಿಗೆ ಹೆಚ್ಚು ಮಹತ್ವ ನೀಡುತ್ತೇನೆ. ಕನ್ನಡಿಗರಿಗಾಗಿ ಒಂದು ಕೋಟಿ ಉದ್ಯೋಗ ಮೀಸಲಿಡುತ್ತೇನೆ ಎಂದರು.
ಪ್ರಾದೇಶಿಕ ಪಕ್ಷಗಳಿಂದ ಮಾತ್ರ ರಾಜ್ಯಕ್ಕೆ ನ್ಯಾಯ ಒದಗಿಸಲು ಸಾಧ್ಯ, ರಾಷ್ಟ್ರೀಯ ಪಕ್ಷಗಳು ಅಧಿಕಾರಕ್ಕೆ ಬರಲು ಮಾತ್ರ ರಾಜ್ಯ ಬೇಕು. ಅಧಿಕಾರಕ್ಕೆ ಬಂದ ನಂತರ ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸುತ್ತವೆ ಎಂದು ಆರೋಪಿಸಿದ ಕುಮಾರಸ್ವಾಮಿ ಕಾಂಗ್ರೆಸ್ ಹಾಗೂ ಬಿಜೆಪಿ ಐದು ವರ್ಷಗಳ ಪೂರ್ಣಾವಧಿ ಅಧಿಕಾರ ಕೊಟ್ಟಿದ್ದೀರಿ. ನನಗೂ ಒಂದು ಅವಧಿಗೆ ಅಧಿಕಾರ ಕೊಟ್ಟು ನೋಡಿ ಎಂದು ಕೇಳಿಕೊಂಡರು.
ಕುಮಾರಸ್ವಾಮಿ ಅವರು ಇಂದು ನಡೆಸುತ್ತಿರುವ ಚಿಂತನ ಮಂಥನ ಕಾರ್ಯಕ್ರಮ ಸಾಮಾಜಿಕ ತಾಣ ಫೋಸ್ ಬುಕ್ ಮೂಲಕ ಲೈವ್ ಆಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ರೀತಿ ಸಾಮಾಜಿಕ ತಾಣಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಮುಂದಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್