ಸಿದ್ದರಾಮಯ್ಯ 
ರಾಜಕೀಯ

ಕೆಪಿಸಿಸಿಗೆ ಅಧ್ಯಕ್ಷರ ನೇಮಕ: ಶೀಘ್ರದಲ್ಲೇ ಸೋನಿಯಾ ನಿರ್ಧಾರ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹುದ್ದೆಗೆ ನೇಮಕ ಸಂಬಂಧ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶೀಘ್ರವೇ ತಮ್ಮ ನಿರ್ಧಾರ ...

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹುದ್ದೆಗೆ ನೇಮಕ ಸಂಬಂಧ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶೀಘ್ರವೇ ತಮ್ಮ ನಿರ್ಧಾರ ತಿಳಿಸಲಿದ್ದಾರೆ.
ಉಪ ಚುನಾವಣೆಯ ಭರ್ಜರಿ ಗೆಲುವಿನ ಸಂಭ್ರಮದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೈಕಮಾಂಡ್ ಭೇಟಿ ಮಾಡಿ, ಮುಂದಿನ ವರ್ಷ ರಾಜ್ಯ ವಿಧಾನಸಭೆಗೆ ನಡೆಯಲಿರುವ ಚುನಾವಣೆಯ ಕಾರ್ಯತಂತ್ರ ರೂಪಿಸುವ ಕುರಿತು ಚರ್ಚೆ ನಡೆಸಿದರು.
ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಮತ್ತು ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಜೊತೆಗೂಡಿ ಸಿದ್ದರಾಮಯ್ಯ ಹೈ ಕಮಾಂಡ್ ಭೇಟಿ ಮಾಡಿ ಚರ್ಚಿಸಿದ್ದಾರೆ. 
ವಿಧಾನ ಪರಿಷತ್‌ಗೆ ನಾಮನಿರ್ದೇಶನ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ವರಿಷ್ಠರೊಂದಿಗೆ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ. 
ಜಿ ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ್ದಾರೆ, ಜೊತೆಗೆ ಗೃಹಖಾತೆಯು ಅವರ ಬಳಿಯಿದೆ.  ಹಾಗಾಗಿ ಅವರನ್ನು ಬದಲಿಸಿ ಹೊಸಬರನ್ನು ನೇಮಿಸಬೇಕೆಂದು ಸಿದ್ದರಾಮಯ್ಯ ಹೈ ಕಮಾಂಡ್ ಜೊತೆ ಚರ್ಚಿಸಿದ್ದಾರೆ ಎನ್ನಲಾಗಿದೆ, ಸಚಿವ ಸಂಪುಟದಲ್ಲಿ ಎರಡು ಸ್ಥಾನಗಳು ಖಾಲಿ ಇದ್ದು, ಭರ್ತಿ ಮಾಡುವ ಕುರಿತು ಈಗ ಪ್ರಸ್ತಾಪಿಸಲಾಗಿಲ್ಲ. ಮುಂದಿನ ತಿಂಗಳು ಈ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿದು ಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ