ದಿಗ್ವಿಜಯ್ ಸಿಂಗ್ ಮತ್ತು ಎಂ.ಬಿ ಪಾಟೀಲ್ 
ರಾಜಕೀಯ

ಕೆಪಿಸಿಸಿ ಅಧ್ಯಕ್ಷ ಹುದ್ದೆಗಾಗಿ ಮುಂದುವರಿದ ಪೈಪೋಟಿ: ರೇಸ್ ನಲ್ಲಿ ಎಂ.ಬಿ ಪಾಟೀಲ್

ಕೆಪಿಸಿಸಿಗೆ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ನಿನ್ನೆ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಜಲ...

ಬೆಂಗಳೂರು: ಕೆಪಿಸಿಸಿಗೆ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ನಿನ್ನೆ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಜಲ ಸಂಪನ್ಮೂಲ ಸಚಿವ ಎಂ. ಬಿ ಪಾಟೀಲ್ ಅಧ್ಯಕ್ಷ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ.
ಇತ್ತೀಚೆಗೆ  ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ, ಅಧ್ಯಕ್ಷ ಹುದ್ದೆ ಆಕ್ಷಾಂಕ್ಷಿಗಳ ಪಟ್ಟಿಯನ್ನು ಹೈಕಮಾಂಡ್ ಮುಂದಿಟ್ಟಿದ್ದರು, ಜಿ ಪರಮೇಶ್ವರ್, ಕೆ.ಎಚ್ ಮುನಿಯಪ್ಪ, ಡಿ.ಕೆ ಶಿವಕುಮಾರ್, ಮತ್ತು ಎಂ. ಪಾಟೀಲ್ ಅವರುಗಳ ಹೆಸರನ್ನು ಹೈಕಮಾಂಡ್ ಮುಂದಿಟ್ಟಿದ್ದಾರೆ. ಸಚಿವ ಎಂ.ಬಿ ಪಾಟೀಲ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಲು ಸಿದ್ದರಾಮಯ್ಯ ಒಲವು ವ್ಯಕ್ತ ಪಡಿಸಿದ್ದಾರೆ ಎನ್ನಲಾಗಿದೆ.
ಎಂ.ಬಿ ಪಾಟೀಲ್ ಗುಂಡ್ಲುಪೇಟೆ ವಿಧಾನ ಸಭೆ ಉಪ ಚುನಾವಣೆಯ ಉಸ್ತುವಾರಿ ವಹಿಸಿಕೊಂಡು ಸಿದ್ದರಾಮಯ್ಯ ಅವರ ವಿಶ್ವಾಸ ಗಳಿಸಿಕೊಂಡಿದ್ದಾರೆ, ಪಾಟೀಲ್ ಲಿಂಗಾಯು ಸಮುದಾಯದ ಪ್ರಬಲ ನಾಯಕರೂ ಕೂಡ. 
ಎಸ್ ಆರ್ ಪಾಟೀಲ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಸಿದ್ದರಾಮಯ್ಯ ಅವರಿಗೆ ಹೆಚ್ಚಿನ ಆಸಕ್ತಿಯಿದೆ. ಒಂದು ವೇಳೆ ಅವರನ್ನು ಬಿಟ್ಟು ಬೇರೆ ಆಯ್ಕೆ ಎಂದಾದರೇ ಎಂ.ಬಿ ಪಾಟೀಲ್ ಪರ ಸಿದ್ದರಾಮಯ್ಯ ಒಲವು ತೋರಿದ್ದಾರೆ.
ಪ್ರಸಕ್ತ ಅಧ್ಯಕ್ಷರಾಗಿರುವ ಜಿ. ಪರಮೇಶ್ವರ್ ಅವರನ್ನು ಹುದ್ದೆಯಲ್ಲಿ ಮುಂದುವರಿಯುವಂತೆ ಹೇಳುವ ಅವಕಾಶಗಳು ಕೂಡ ಇದೆ, ಪಕ್ಷವನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಹೈಕಮಾಂಡ್ ಸಲಹೆ ನೀಡಿದೆ ಎಂದು ಪರಮೇಶ್ವರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!