ಸಿದ್ದರಾಮಯ್ಯ - ದಿಗ್ವಿಜಯ್ ಸಿಂಗ್
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆಯನ್ನು ಎದುರಿಸುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದಿಗ್ವಿಜಯ್ ಸಿಂಗ್ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ. ಆದರೆ ಕಾಂಗ್ರೆಸ್ ಶಾಸಕಾಂಗ ಪಕ್ಷ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದೆ ಎಂದು ಹೇಳಿದ್ದಾರೆ.
ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನು ಬದಲಾಯಿಸುವ ಯಾವುದೇ ಪ್ರಸ್ತಾಪ ಇಲ್ಲ. ಮುಂದಿನ ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಡಾ.ಜಿ.ಪರಮೇಶ್ವರ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಅವರು ತಿಳಿಸಿದ್ದಾರೆ.
ಇದೇ ವೇಳೆ ಉಪ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಿದ ಸಹೋದರ, ಸಹೋದರಿಯರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳುತ್ತಿದ್ದರು ಲಿಂಗಾಯಿತರು ನಮ್ಮೊಂದಿಗೆ ಇದ್ದಾರೆ ಎಂದು. ಆದರೆ ಆ ಸಮುದಾಯದ ಹೆಚ್ಚಿನ ಮತದಾರರಿರುವ ನಂಜನಗೂಡು ಮತ್ತು ಗುಂಡ್ಲುಪೇಟೆಯಲ್ಲಿ ನಾವು ಗೆಲುವು ಸಾಧಿಸಿದ್ದೇವೆ. ಇದರಿಂದ ಲಿಂಗಾಯಿತರು ಕಾಂಗ್ರೆಸ್ ಪರವಾಗಿದ್ದಾರೆ ಎಂದು ಸ್ಪಷ್ಟವಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics