ಕೆ.ಎಸ್ ಈಶ್ವರಪ್ಪ 
ರಾಜಕೀಯ

ಬಿಎಸ್ ವೈ ನೇತೃತ್ವದ ಸಭೆಗೆ ಈಶ್ವರಪ್ಪ ಗೈರು: ಪಕ್ಷದೊಳಗೆ ಮತ್ತೆ ಭಿನ್ನಮತದ ಹೊಗೆ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಕರೆದಿದ್ದ ನಂಜನಗೂಡು- ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣೆ ಸೋಲಿನ ಆತ್ಮಾವಲೋಕನ ...

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಕರೆದಿದ್ದ ನಂಜನಗೂಡು- ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣೆ ಸೋಲಿನ ಆತ್ಮಾವಲೋಕನ ಸಭೆಗೆ ಹಿರಿಯ ಮುಖಂಡ ಕೆ.ಎಸ್ ಈಶ್ವರಪ್ಪ ಗೈರಾಗಿದ್ದಾರೆ.
ಸಭೆಯ ನಂತರ ಮಾತನಾಡಿದ  ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಜಗದೀಶ ಶೆಟ್ಟರ್‌ ಹಾಗೂ ಈಶ್ವರಪ್ಪ ಸಭೆಗೆ ಬರಲು ಸಾಧ್ಯವಾಗುತ್ತಿಲ್ಲ ಎಂದು ಮೊದಲೇ ಅನುಮತಿ ಪಡೆದಿದ್ದಾರೆ. ಈ ನಾಯಕರ ಗೈರು ಹಾಜರಿಗೆ ಬೇರೆ ಅರ್ಥ ಕಲ್ಪಿಸಬೇಕಾಗಿಲ್ಲ ಎಂದು ಸಮರ್ಥನೆ ನೀಡಿದ್ದಾರೆ.
ಪಕ್ಷದೊಳಗಿನ ಬಿಕ್ಕಟ್ಟು ಪರಿಹರಿಸಲು ಬಿಜೆಪಿ ಅಧ್ಯಕ್ಷ ಅಮಿತ್‌ ಷಾ ನಾಲ್ವರ ಸಮಿತಿ ರಚಿಸಿದ್ದಾರೆ. ಕಳೆದ ಫೆಬ್ರುವರಿ 10ರೊಳಗೆ ಎಲ್ಲ ಸಮಸ್ಯೆಗಳನ್ನು ಪರಿಹಾರ ಮಾಡು­ವಂತೆಯೂ ಅವರು ಸೂಚಿಸಿದ್ದರು. ಇದುವರೆಗೂ ಸಮಿತಿ ಸಭೆ ಕರೆದಿಲ್ಲ ಯಡಿಯೂರಪ್ಪ ಸರ್ವಾಧಿ­ಕಾರಿಯಂತೆ ವರ್ತಿಸುತ್ತಿದ್ದಾರೆ ಎಂಬ ಕಾರಣಕ್ಕೆ ಈಶ್ವರಪ್ಪ ಸಭೆಗೆ ಹಾಜರಾಗಿಲ್ಲ ಎಂದು ಹೇಳಲಾಗುತ್ತಿದೆ.
ಹಣದ ಹಂಚಿಕೆ,ಅಧಿಕಾರದ ದುರುಪಯೋಗ, ಜೆಡಿಎಸ್ ಜೊತೆಗೆ ಹೊಂದಾಣಿಕೆ, ಕಾಂಗ್ರೆಸ್ ಗೆಲುವಿಗೆ ಕಾರಣವಾಗಿದೆ ಎಂದು ಅರವಿಂದ ಲಿಂಬಾವಳಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಜೆಪಿಯಲ್ಲಿ ಸಡನ್ ಆಪರೇಷನ್? ವಿಜಯೇಂದ್ರ ಚೇಂಜ್: ಸದಾನಂದಗೌಡ ಆಡಿಯೋ ವೈರಲ್; ಮಾಜಿ ಸಿಎಂ ಹೇಳಿದ್ದೇನು?

ಖಮೇನಿ ಅಂತ್ಯಕ್ರಿಯೆಗೆ ಹೋಗತ್ತಿಲ್ಲ ಪ್ರಧಾನಿ ಮೋದಿ; ಆದ್ರೆ ಭಾರತದ ಪರವಾಗಿ ಇಬ್ಬರು ಭಾಗಿ!

2ನೇ ಅವಧಿಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣವಚನ ಸ್ವೀಕಾರ

ನಂದಿಬೆಟ್ಟದ ಹೋಂಸ್ಟೇನಲ್ಲಿ ಯುವತಿ ಶವಪತ್ತೆ; ಪ್ರೇಯಸಿ ಸುರಭಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ್ನ ಕೇರಳ ಮೂಲದ ಅಲಿ!

ಬೆಂಗಳೂರು: ಗರ್ಲ್ ಫ್ರೆಂಡ್ ಅನ್ನು ಡಿನ್ನರ್ ಗೆ ಕರೆದು, ಬರ್ಬರವಾಗಿ ಕೊಲೆ ಮಾಡಿದ ಪ್ರಿಯಕರ!