ಕೆ.ಎಸ್ ಈಶ್ವರಪ್ಪ 
ರಾಜಕೀಯ

ಈಶ್ವರಪ್ಪರನ್ನು ಬಿಜೆಪಿಯಿಂದ ಕಿತ್ತೊಗೆಯಿರಿ: ಬಿಎಸ್ ವೈ ಬೆಂಬಲಿಗ ಶಾಸಕರ ಆಗ್ರಹ

ಕೆ.ಎಸ್ ಈಶ್ವರಪ್ಪ ನೇತೃತ್ವದ ಅತೃಪ್ತರ ಬಣ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ಮುಗಿಸುತ್ತಿದ್ದಂತೆ ಬಿಜೆಪಿ ನಾಯಕರು..

ಬೆಂಗಳೂರು: ಕೆ.ಎಸ್ ಈಶ್ವರಪ್ಪ ನೇತೃತ್ವದ ಅತೃಪ್ತರ ಬಣ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ಮುಗಿಸುತ್ತಿದ್ದಂತೆ ಬಿಜೆಪಿ ನಾಯಕರು ತಿರುಗಿ ಬಿದ್ದಿದ್ದಾರೆ.
ಬೆಂಗಳೂರಿನ ಬಿಜೆಪಿ ಸಂಸದರು ಮತ್ತು ಶಾಸಕರು ಮಲ್ಲೇಶ್ವರಂ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಈಶ್ವರಪ್ಪ ವಿರುದ್ಧ ಹರಿಹಾಯ್ದಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ಕೆ.ಎಸ್. ಈಶ್ವರಪ್ಪ ಮತ್ತು ಅವರ ಬೆಂಬಲಿಗರನ್ನು ಉಚ್ಚಾಟಿಸುವಂತೆ ಬಿಎಸ್ ವೈ ಬೆಂಬಲಿಗ ಶಾಸಕರು ಆಗ್ರಹಿಸಿದ್ದಾರೆ.
‌ಶಾಸಕ ವೈ.ಎ. ನಾರಾಯಣಸ್ವಾಮಿ, ಎಂ. ಕೃಷ್ಣಪ್ಪ. ರವಿ ಸುಬ್ರಮಣ್ಯ, ವಿಜಯ್ ಕುಮಾರ್ ಅವರು ಈಶ್ವರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿ ‘ಈಶ್ವರಪ್ಪ ಅವರ ಎಲ್ಲ ಚಟುವಟಿಕೆಗಳನ್ನೂ ಪಕ್ಷದ ಕೇಂದ್ರ ನಾಯಕರು ಗಮನಿಸಿದ್ದಾರೆ. ಕೂಡಲೇ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು. ಒಂದೆರಡು ದಿನಗಳಲ್ಲಿ ಕೇಂದ್ರ ನಾಯಕರು ಶಿಸ್ತು ಕ್ರಮ ಕೈಗೊಳ್ಳಲಿದ್ದಾರೆ’ ಎಂದರು.
ಸಮಾವೇಶ ನಡೆಸುವ ಮೂಲಕ ಈಶ್ವರಪ್ಪ ಪಕ್ಷದ ರಾಜ್ಯ ನಾಯಕರುಗಳ ವಿರುದ್ಧ ಅವಹೇಳನಕಾರಿಯಾದ ಹೇಳಿಕೆ ನೀಡುತ್ತಿದ್ದಾರೆ. ಹೀಗಾಗಿ ಕೂಡಲೇ ಅವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. 
ಯಡಿಯೂರಪ್ಪ ಅವರ ಮಿಷನ್ 150 ಗೆ ಪೆಟ್ಟು ನೀಡಲು ಸಿಎಂ ಸಿದ್ದರಾಮಯ್ಯ, ಈಶ್ವರಪ್ಪ ಮತ್ತು ಜೆಡಿಎಸ್ ಮುಖಂಡ ಎಚ್ .ಡಿಕುಮಾರ ಸ್ವಾಮಿ ರಹಸ್ಯ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂಬ ವದಂತಿಗಳು ಕೇಳಿ ಬರುತ್ತಿವೆ .

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್