ರಾಜಕೀಯ

ಈಶ್ವರಪ್ಪ ವಿರುದ್ಧ ಶಿಸ್ತು ಕ್ರಮ ಜರುಗಿಸಿ: ಮುರುಳಿಧರ ರಾವ್ ಗೆ ಯಡಿಯೂರಪ್ಪ ಒತ್ತಾಯ

Shilpa D
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಈಶ್ವರಪ್ಪ-ಯಡಿಯೂರಪ್ಪ ನಡುವಿನ ಬಹಿರಂಗ ಸಮರವನ್ನು ಶಮನಗೊಳಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರುಳಿಧರ ರಾವ್ ನಿನ್ನೆ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ.
ಮುರುಳಿಧರ ರಾವ್ ರಾಜ್ಯಕ್ಕೆ ಆಗಮಿಸುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಈಶ್ವರಪ್ಪ ಮತ್ತು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಶಿಶ್ತುಕ್ರಮ ಕೈಗೊಳ್ಳಬೇಕೆಂದು ಬೇಡಿಕೆ ಇಟ್ಟಿರುವುದಾಗಿ ಹೇಳಿದ್ದರು.
ಐದು ರಾಜ್ಯಗಳ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಲು ಸಾಧ್ಯವಾಗದ ಕಾರಣ ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಮ್ ಲಾಲ್ ಮತ್ತು ಮುರುಳಿಧರ ರಾವ್ ಅವರನ್ನು ಭೇಟಿ ಮಾಡಿದ್ದರು. 
ಈಶ್ವರಪ್ಪ ಮತ್ತು ಅವರ ಕೆಲ ಬೆಂಬಲಿಗರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಮುರುಳಿಧರ ರಾವ್ ಅವರ ಬಳಿ ಒತ್ತಾಯಿಸಿರುವುದಾಗಿ ತುಮಕೂರು ಸಂಸದ ಜಿ.ಎಸ್ ಬಸವರಾಜು ಹೇಳಿದ್ದಾರೆ.ಇಂದು ಕೂಡ ಹಲವು ಬಿಜೆಪಿ ನಾಯಕರು ಮಲ್ಲೇಶ್ವರಂ ನ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಈಶ್ವರಪ್ಪ ಬಣದಲ್ಲಿ ಗುರುತಿಸಿಕೊಂಡಿರುವ ಭಾನುಪ್ರಕಾಶ್, ಎಸ್.ಆರ್ ರವೀಂದ್ರನಾಥ್, ಮತ್ತು ಸೊಗಡು ಶಿವಣ್ಣ ಶನಿವಾರ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಕಾಣಿಸಿಕೊಂಡಿದ್ದರು.
SCROLL FOR NEXT