ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿಗೆ ಒಳಗಾಗಿರುವ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಶಕ್ತಿ ಏನು ಅಂತ ಬಿಜೆಪಿಗೆ ಗೊತ್ತಿದೆ. ಹೀಗಾಗಿ ಐಟಿ ದಾಳಿ ಮೂಲಕ ಅವರನ್ನು ರಾಜಕೀಯವಾಗಿ ಬಗ್ಗು ಬಡಿಯಲು ಬಿಜೆಪಿ ಸಂಚು ರೂಪಿಸಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಾ.ಜಿ ಪರಮೇಶ್ವರ ಅವರು ಗುರುವಾರ ಆರೋಪಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿನ ಐಟಿ ದಾಯ ಬಗ್ಗೆ ಚರ್ಚಿಸಿದ್ದೇನೆ. ಡಿ ಕೆ ಶಿವಕುಮಾರ್ ಮನೆ ಮೇಲಿನ ಐಟಿ ದಾಳಿ ರಾಜಕೀಯ ಪ್ರೇರಿತ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಕ್ರಮ ಖಂಡನೀಯ. ರಾಜಕೀಯ ಲಾಭಕ್ಕಾಗಿ ಕೇಂದ್ರ ಸರ್ಕಾರ ಇಷ್ಟು ಕೀಳಉ ಮಟ್ಟಕ್ಕೆ ಇಳಿಯಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಡದಿಯ ರೆಸಾರ್ಟ್ ನಲ್ಲಿರುವ ಗುಜರಾತ್ ಶಾಸಕರಿಗೆ ಆತಿಥ್ಯ ನೀಡುವುದು ಕಾಂಗ್ರೆಸ್ ಪಕ್ಷದ ಕರ್ತವ್ಯ. ಗುಜರಾತ್ ಶಾಸಕರ ಹೊಣೆಯನ್ನು ನಾವೆಲ್ಲ ಹೊತ್ತಿದ್ದೇವೆ. ಇದರಲ್ಲಿ ಯಾವುದೇ ತಪ್ಪಿಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics