ಬೆಂಗಳೂರು: ಬಿಜೆಪಿ ತೊರೆದಿರುವ ಕೇಂದ್ರದ ಮಾಜಿ ಸಚಿವ ವಿ. ಧನಂಜಯಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು. ಇತ್ತೀಚೆಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್‌ಗಾಂಧಿ ಅವರು ಬೆಂಗಳೂರಿಗೆ ಭೇಟಿ ನೀಡಿದ್ದಾಗ ಧನಂಜಯಕುಮಾರ್ ಪಕ್ಷ ಸೇರ್ಪಡೆ ಬಗ್ಗೆ ಚರ್ಚಿಸಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಧನಂಜಯ ಕುಮಾರ್, ‘ಅಧಿಕಾರದ ಆಸೆಯಿಂದ ನಾನು ಕಾಂಗ್ರೆಸ್ ಸೇರುತ್ತಿಲ್ಲ. 2004ರಲ್ಲೇ ಆಹ್ವಾನ ಬಂದಿತ್ತು. ಆದರೆ, ಈಗ ನಿರ್ಧಾರ ತೆಗೆದುಕೊಂಡಿದ್ದೇನೆ’ ಎಂದು ಹೇಳಿದರು.
ಬಿಜೆಪಿಯ ಯುವ ಘಟಕದ ಮೂಲಕ ರಾಜಕೀಯ ಜೀವನ ಆರಂಭಿಸಿದ ಧನಂಜಯಕುಮಾರ್, 1983 ರಲ್ಲಿ ಶಾಸಕರಾಗಿ ಆಯ್ಕೆಯಾದರು. 1991 ರಲ್ಲಿ ಮಂಗಳೂರು ಲೋಕಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ನನಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನನ್ನ ಒಡನಾಡಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರಾಷ್ಟ್ರ ಹಿತಕ್ಕಾಗಿ ಕಾಂಗ್ರೆಸ್ ಸೇರಿದ್ದೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics