ಸಚಿವ ಡಿ.ಕೆ.ಶಿವಕುಮಾರ್ 
ರಾಜಕೀಯ

ಐಟಿ ದಾಳಿಗೂ ಮೊದಲು ಮತ್ತು ನಂತರ ನಡೆದದ್ದನ್ನು ಹೇಳಿದರೆ ಆಗಬಾರದ್ದೆಲ್ಲಾ ಆಗುತ್ತದೆ: ಡಿಕೆಶಿ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಿನ್ನೆ ಹೊಸದೊಂದು ಕುತೂಹಲದ ಬಾಂಬ್ ಸಿಡಿಸಿದ್ದಾರೆ. ಆದಾಯ....

ಬೆಂಗಳೂರು: ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಿನ್ನೆ ಹೊಸದೊಂದು ಕುತೂಹಲದ ಬಾಂಬ್ ಸಿಡಿಸಿದ್ದಾರೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡುವ ಮೊದಲು ಮತ್ತು ನಂತರ ಏನೆಲ್ಲಾ ನಡೆಯಿತು ಎಂಬುದನ್ನು ಹೇಳಿದರೆ ಆಗಬಾರದ್ದೆಲ್ಲಾ ಆಗುತ್ತದೆ, ವಿಷಯ ಎಲ್ಲೆಲ್ಲಿಗೋ ಹೋಗುತ್ತದೆ, ಅದರ ಪರಿಣಾಮ ಜೋರಾಗಬಹುದು ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. 
ಪಕ್ಷಕ್ಕೆ ಸೇರಿಕೊಳ್ಳುವಂತೆ ಬಿಜೆಪಿ ಆಹ್ವಾನ ನೀಡಿತ್ತೇ ಎಂದು ಸುದ್ದಿಗಾರರು ಕೇಳಿದಾಗ  ಡಿ.ಕೆ.ಶಿವಕುಮಾರ್ ಈ ರೀತಿ ಉತ್ತರಿಸಿದರು.
ಬಿಜೆಪಿಯ ಹಿರಿಯ ಮುಖಂಡರೊಬ್ಬರು ಪಕ್ಷಕ್ಕೆ ಆಹ್ವಾನಿಸಿದ್ದಕ್ಕೆ ತಿರಸ್ಕರಿಸಿದ ಕಾರಣ ಡಿಕೆಶಿ ಮನೆ ಮೇಲೆ  ಐಟಿ ದಾಳಿ ನಡೆಸಲಾಯಿತು ಎಂಬ ವದಂತಿ ಹಬ್ಬಿತ್ತು. ಈ ಸಂಬಂಧ ನಿಮಗೆ ಬಿಜೆಪಿ ಸೇರಲು ಆಹ್ವಾನ ಬಂದಿತ್ತೇ ಎಂದು ನಿನ್ನೆ ಸುದ್ದಿಗಾರರು ಅವರನ್ನು ಕೇಳಿದಾಗ, ಏನೆಲ್ಲಾ ಆಯಿತು ಎಂಬ ಬಗ್ಗೆ ನಾನು ಈಗ ಮಾತನಾಡಿದರೆ ಆಗಬಾರದ್ದೆಲ್ಲಾ ಆಗುತ್ತದೆ. ಹೆರಿಗೆ ನೋವು ಏನೆಂಬುದು ಅನುಭವಿಸಿದವರಿಗೆ ಗೊತ್ತು. ಗುಜರಾತ್ ಫಲಿತಾಂಶ ಬಂದ ಬಳಿಕ ಮಾತನಾಡುತ್ತೇನೆ, ಅಲ್ಲಿಯವರೆಗೆ ಏನೂ ಹೇಳುವುದಿಲ್ಲ ಎಂದು ಉತ್ತರಿಸಲು ನಿರಾಕರಿಸಿದರು.
ನಿನ್ನೆ ಡಿಕೆಶಿಯವರ ಸದಾಶಿವನಗರ ನಿವಾಸಕ್ಕೆ ಬೇಲಿ ಮಠದ ಶ್ರೀಗಳು, ಸಚಿವ ಸತೀಶ್ ಜಾರಕಿಹೊಳಿ ಮೊದಲಾದವರು ಭೇಟಿ ಮಾಡಿ ಧೈರ್ಯ ತುಂಬಿದ್ದರು. ಕಳೆದ ಮೂರು ದಿನಗಳಿಂದ ಸಾಕಷ್ಟು ಶ್ರೀಗಳು ಆಶೀರ್ವಾದ ಮಾಡಿ ಮನಸ್ಸಿಗೆ ಸಮಾಧಾನ ಹೇಳುತ್ತಿದ್ದಾರೆ. ಸುತ್ತೂರು ಮಠದ ಶ್ರೀಗಳು ಕೂಡ ದೂರವಾಣಿ ಕರೆ ಮಾಡಿ ಮಾತನಾಡಿದ್ದರು. ಇವರೆಲ್ಲಾ ನನ್ನ ಹಿಂದಿನ ಶಕ್ತಿ ಎಂದು ಡಿಕೆಶಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ